ಸರ್ವಪಕ್ಷಗಳು ಬೆಂಬಲ ವ್ಯಕ್ತಪಡಿಸಿವೆ: ನಾಯ್ಡು
Update: 2016-09-29 17:18 IST
ಹೊಸದಿಲ್ಲಿ,ಸೆ.29: ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ಅಡಗುದಾಣಗಳ ಮೇಲೆ ನಡೆದ ಭಾರತೀಯ ಸೇನಾ ಕಾರ್ಯಾಚರಣೆಯ ಬಗ್ಗೆ ವಿಪಕ್ಷಗಳಿಗೆ ಮಾಹಿತಿ ನೀಡಲಾಗಿದ್ದು, ಎಲ್ಲಾ ವಿಪಕ್ಷ ನಾಯಕರಿಂದ ಬೆಂಬಲ ವ್ಯಕ್ತವಾಗಿದೆ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಢು ಹೇಳಿದ್ದಾರೆ.
ಗುರುವಾರ ಇಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರೆದ ತುರ್ತು ಸರ್ವಪಕ್ಷಗಳ ಸಭೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್, ಸಿಪಿಎಂ, ಜೆಡಿಯು, ಎನ್‌ಸಿಪಿ ಸೇರಿದಂತೆ ಹೆಚ್ಚಿನ ಎಲ್ಲಾ ವಿಪಕ್ಷಗಳು ಭಾಗವಹಿಸಿದ್ದವು.
ಪಿಒಕೆಯಲ್ಲಿ ಸೇನೆ ನಡೆಸಿದ ಯಶಸ್ವಿ ಕಾರ್ಯಾಚರಣೆಗೆ ಕಾಂಗ್ರೆಸ್‌ನ ಹಿರಿಯ ಮುಖಂಡ ಗುಲಾಂ ನಬಿ ಆಜಾದ್, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಜೆಡಿಯು ಧುರೀಣ ಶರದ್ ಯಾದವ್ ಧನ್ಯವಾದ ಹೇಳಿದ್ದಾರೆ.