ಅಪಘಾತದ ಗಾಯಾಳು ಮೃತ್ಯು
Update: 2016-09-29 21:42 IST
ಹೆಬ್ರಿ, ಸೆ.29: ಹೆಬ್ರಿ ಅರಣ್ಯ ಇಲಾಖೆಯ ಕಚೇರಿಯ ಎದುರಿನ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತರನ್ನು ಶಿವಪುರ ಪಾಂಡುಕಲ್ಲು ನಿವಾಸಿ ಲಲಿತಾ(52) ಎಂದು ಗುರು ತಿಸಲಾಗಿದೆ. ಇವರು ಸೆ.25ರಂದು ತನ್ನ ಮಗ ಅಶೋಕನ ಬೈಕಿನ ಹಿಂಬದಿ ಯಲ್ಲಿ ಕುಳಿತು ಮನೆಯಿಂದ ಹೆಬ್ರಿ ಕಡೆಗೆ ಹೋಗುತ್ತಿದ್ದಾಗ ಬೈಕ್ ಸವಾರನ ಹತೋಟಿ ತಪ್ಪಿ ಪಲ್ಟಿಯಾಯಿತು. ಇದರಿಂದ ಹಿಂಬದಿಯಲ್ಲಿ ಕುಳಿತಿದ್ದ ಲಲಿತಾ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ನಸುಕಿನ ವೇಳೆ 2:30ರ ಸುಮಾರಿಗೆ ಲಲಿತಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.