×
Ad

ಕೊಲೆ ಯತ್ನ ಪ್ರಕರಣದ ಆರೋಪಿಯ ಸೆರೆ

Update: 2016-09-29 21:52 IST

ಮಂಗಳೂರು,ಸೆ.29:ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮಿಜಾರು ಬಡಗ ಎಡಪದವಿನ ಕೆ.ಅಬ್ದುಲ್ ಬಶೀರ್ ಅಲಿಯಾಸ್ ಅರ್ಗ ಬಶೀರ್ (42)ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮಿಜಾರು ಬಳಿಯಲ್ಲಿ ಜುಲೈ ತಿಂಗಳಲ್ಲಿ ನಡೆದ ಕೊಲೆಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದ ಈತ ತಲೆಮರೆಸಿಕೊಂಡಿದ್ದನು.

ಧರ್ಮೆಂದ್ರ ಮತ್ತು ಅವರ ಸ್ನೇಹಿತ ದೇವು ಎಂಬವರು ಅವರ ಮನೆಗೆ ಹೋಗುತ್ತಿದ್ದ ಸಮಯ 4-5 ಬೈಕ್ ಗಳಲ್ಲಿ ಮತ್ತು ಕಾರುಗಳಲ್ಲಿ 10-15 ಜನರು ಬಂದು ಇವರನ್ನು ಅಡ್ಡಗಟ್ಟಿ ಅವರನ್ನು ಬೈಕ್ ನಿಂದ ಎಳೆದು ಹಾಕಿ ಅವಾಚ್ಯ ಶಬ್ದಗಳಿಂದ ಬೈದು ಮರದ ಸೊಂಟೆ ಹಾಗೂ ಮೊಳೆಯೊಡೆದ ಮರದ ತುಂಡಿನಿಂದ, ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿದ್ದು, ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಈತ ಪ್ರಮುಖ ಆರೋಪಿಯಾಗಿದ್ದನು. ಈತನ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಈತನನ್ನು ಮೂಡುಬಿದಿರೆಯ ಶಿರ್ತಾಡಿ ಬಳಿಯಿಂದ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಬಜ್ಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಆರೋಪಿಗೆ ನ್ಯಾಯಾಲಯ15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿ ವಿರುದ್ಧ ಈ ಹಿಂದೆ ಬಜ್ಪೆೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೂಡಾ ಪ್ರಕರಣವೊಂದು ದಾಖಲಾಗಿತ್ತು.

ಸಿಸಿಬಿ ಘಟಕದ ಇನ್‌ಸ್ಪೆಕ್ಟರ್ ಸುನೀಲ್ ವೈ. ನಾಯ್ಕ್ ಮತ್ತು ಎಸ್ಸೈಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿ ಪತ್ತೆಕಾರ್ಯದಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News