ಮಾನನಷ್ಟ ಮೊಕದ್ದಮೆ: ಉಮಾ ಭಾರತಿ ವಿರುದ್ಧ ಬೇಜಾಮೀನು ಬಂಧನ ವಾರಂಟ್‌

Update: 2016-09-29 17:12 GMT

ಭೋಪಾಲ,ಸೆ.29: ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು 13 ವರ್ಷಗಳ ಹಿಂದೆ ತನ್ನ ವಿರುದ್ಧ ದಾಖಲಿಸಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಎದುರು ಹಾಜರಾಗದಿದ್ದಕ್ಕಾಗಿ ಸ್ಥಳೀಯ ನ್ಯಾಯಾಲಯವು ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾ ಭಾರತಿ ಅವರ ವಿರುದ್ಧ ಗುರುವಾರ ಜಾಮೀನು ರಹಿತ ಬಂಧನ ವಾರಂಟ್‌ನ್ನು ಹೊರಡಿಸಿದೆ.ಸರ್ವೋಚ್ಚ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ತನ್ನ ಕಕ್ಷಿದಾರರು ದಿಲ್ಲಿಯಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಭಾಗಿಯಾಗಿರುವುದರಿಂದ ವಿಚಾರಣೆಗೆ ಖುದ್ದು ಹಾಜರಾತಿ ಯಿಂದ ಅವರಿಗೆ ವಿನಾಯಿತಿ ನೀಡುವಂತೆ ಕೋರಿ ಉಮಾ ಭಾರತಿಯವರ ವಕೀಲ ಹರೀಶ್ ಮೆಹ್ತಾ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಭುಭಾಸ್ಕರ ಯಾದವ ಅವರು ವಜಾಗೊಳಿಸಿದರು.2015,ಅಕ್ಟೋಬರ್‌ನಿಂದಲೂ ಉಮಾ ಭಾರತಿಯವರು ತನ್ನ ಹೇಳಿಕೆಯನ್ನು ದಾಖಲಿಸಲು ನ್ಯಾಯಾಲಯಕ್ಕೆ ಹಾಜರಾಗುತ್ತಿಲ್ಲ ಮತ್ತು ಈ 13 ವರ್ಷಗಳಷ್ಟು ಹಳೆಯದಾದ ಪ್ರಕರಣದಲ್ಲಿ ಅವರಿಗೆ ಸಾಕಷ್ಟು ಕಾಲಾವಕಾಶ ನೀಡಲಾಗಿದೆ ಎಂದು ನ್ಯಾಯಾಧೀಶರು ಬೆಟ್ಟು ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News