ಅ.8, 9ರಂದು ರಾಜ್ಯಮಟ್ಟದ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್
Update: 2016-09-29 23:37 IST
ಉಡುಪಿ, ಸೆ.29: ಮಣಿಪಾಲ ಬ್ಯಾಡ್ಮಿಂಟನ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ 15ನೆ ರಾಜ್ಯ ಮಟ್ಟದ ಮುಕ್ತ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಸ್ಪರ್ಧೆಯನ್ನು ಅ.8 ಮತ್ತು 9ರಂದು ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಪುರುಷರ ಡಬಲ್ಸ್, 40 ವರ್ಷ ಮೇಲ್ಪಟ್ಟ ಪುರುಷರ ಡಬಲ್ಸ್, ಮುಕ್ತ ಮಹಿಳೆಯರ ಡಬಲ್ಸ್, 17 ವರ್ಷ ಕೆಳಗಿನ ಬಾಲಕ ಹಾಗೂ ಬಾಲಕಿಯರ ಸಿಂಗಲ್ಸ್ ಮತ್ತು ಡಬಲ್ಸ್, 13 ವರ್ಷ ಕೆಳಗಿನ ಬಾಲಕ ಮತ್ತು ಬಾಲಕಿಯರ ಸಿಂಗಲ್ಸ್, 11ವರ್ಷ ಕೆಳಗಿನ ಬಾಲಕ ಮತ್ತು ಬಾಲಕಿಯರ ಸಿಂಗಲ್ಸ್ ವಿಭಾಗದಲ್ಲಿ ಸ್ಪರ್ಧೆಗಳು ಜರಗಲಿದ್ದು, ವಿಜೇತರಿಗೆ ನಗದು ಬಹುಮಾನ, ಆಕರ್ಷಕ ಟ್ರೋಫಿ ಹಾಗೂ ಸರ್ಟಿಫಿಕೇಟ್‌ಗಳನ್ನು ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಘಟಕ ಅಕ್ಷಯ್ ಕುಮಾರ್ ಮೊ.ನಂ.:9900904146ರನ್ನು ಸಂಪರ್ಕಿಸುವಂತೆ ಪ್ರಕಟನೆಯಲ್ಲಿ ತಿಳಿಸಿದೆ.