ಬಿಹಾರದಲ್ಲಿ ಮದ್ಯ ನಿಷೇಧವನ್ನು ರದ್ದುಪಡಿಸಿದ ಪಾಟ್ನಾ ಹೈಕೋರ್ಟ್
Update: 2016-09-30 15:54 IST
ಪಾಟ್ನಾ, ಸೆ.30:ಕಳೆದ ಏಪ್ರಿಲ್ ನಿಂದ ಬಿಹಾರದಲ್ಲಿ ಜಾರಿಗೆ ಬಂದಿದ್ದ ಮದ್ಯ ಮಾರಾಟ ನಿಷೇಧ ಆದೇಶವನ್ನು ಪಾಟ್ನಾ ಹೈಕೋರ್ಟ್ ಇಂದು ರದ್ದುಗೊಳಿಸಿದೆ.
ಮದ್ಯ ಮಾರಾಟ ನಿಷೇಧ ಆದೇಶ ಪ್ರಶ್ನಿಸಿದ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ, ಬಿಹಾರ ಸರಕಾರದ ಕ್ರಮ ಕಾನೂನು ಬಾಹಿರ ಎಂದು ಹೇಳಿದೆ.
ಬಿಹಾರ ರಾಜ್ಯದಲ್ಲಿ ಏಪ್ರಿಲ್ 1ರಿಂದ ಸಂಪೂರ್ಣ ಮದ್ಯ ಮಾರಾಟಕ್ಕೆ ನಿಷೇಧ ವಿಧಿಸಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶ ನೀಡಿದ್ದರು.