×
Ad

ಕೂಡಿಗೆ ಮೊರಾರ್ಜಿ ಶಾಲೆಯಲ್ಲಿ ಕೆಎಲ್‌ಇ ಸಂಸ್ಥೆಯ ಶತಮಾನೋತ್ಸವ

Update: 2016-09-30 22:10 IST

 ಕುಶಾಲನಗರ ಸೆ.30: ಬೆಳಗಾವಿ ಕರ್ನಾಟಕ ಲಿಂಗಾಯತ್ ಎಜುಕೇಶನ್ ಸೊಸೈಟಿ(ಕೆಎಲ್‌ಇ) ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಕೊಡಗು ಜಿಲ್ಲಾ ಸಮಿತಿ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಕೆಎಲ್‌ಇ ಸಂಸ್ಥೆಯ ಶತಮಾನೋತ್ಸವದ ಸಂಭ್ರಮಾಚರಣೆಯ ಅಂಗವಾಗಿ ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಗಮನ ಸೆಳೆಯಿತು.

 ಈ ವೇಳೆ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಬಿಸಿಎಂ ಇಲಾಖೆಯ ಜಿಲ್ಲಾ ಅಧಿಕಾರಿ ಕೆ.ವಿ. ಸುರೇಶ್, ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳು ವುದರೊಂದಿಗೆ ವಿಜ್ಞಾನ ವಿಷಯದಲ್ಲಿ ಆಸಕ್ತಿ ಬೆಳೆಸಿಕೊಂಡು ವೈಜ್ಞಾನಿಕ ಸಂಶೋಧನೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ವಿಜ್ಞಾನ ವಸ್ತು ಪ್ರದರ್ಶನ ಸಹಕಾರಿಯಾಗಿದೆ ಎಂದರು.

ರಾಜ್ಯ ವಿಜ್ಞಾನ ಪರಿಷತ್ತಿನ ವತಿಯಿಂದ ವಿಜ್ಞ್ಞಾನಕ್ಕೆ ಸಂಬಂಧಿಸಿದಂತೆ ಏರ್ಪಡಿಸುತ್ತಿರುವ ವೈವಿಧ್ಯಮಯ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ಭವಿಷ್ಯದಲ್ಲಿ ವಿಜ್ಞ್ಞಾನ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಲು ಸಹಕಾರಿಯಾಗಿವೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಕೆ.ಪ್ರಕಾಶ್ ಮಾತನಾಡಿ, ವಿಜ್ಞ್ಞಾನ ಮತ್ತು ತಂತ್ರಜ್ಞ್ಞಾನಗಳು ಮಾನವ ಕಲ್ಯಾಣಕ್ಕೆ ಮಾತ್ರ ಬಳಕೆಯಾಗಬೇಕು ಎಂದರು. ಜಿಲ್ಲೆಯ ವಿವಿಧ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜುಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ವಿಜ್ಞ್ಞಾನಕ್ಕೆ ಸಂಬಂಧಿಸಿದಂತೆ ಮಾರ್ಗದರ್ಶಿ ಶಿಕ್ಷಕರ ನೆರವಿನಿಂದ ತಯಾರಿಸಿದ್ದ ವಿವಿಧ ಮಾದರಿಗಳನ್ನು ಪ್ರದರ್ಶಿಸಿದರು. ಮುಖ್ಯ ಅಥಿತಿಗಳಾಗಿ ತಾಪಂ ಸದಸ್ಯ ಗಣೇಶ್, ಕೂಡುಮಂಗಳೂರು ಗ್ರಾಪಂ ಅಧ್ಯಕ್ಷೆ ಲಕ್ಷ್ಮೀ, ಆಹಾರ ಸಂರಕ್ಷಣಾ ಜಾಗೃತಿ ಅಭಿಯಾನದ ಸಂಚಾಲಕ ಎನ್.ಕೆ. ಮೋಹನ್‌ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಾಜ್ಯ ವಿಜ್ಞ್ಞಾನ ಪರಿಷತ್ತಿನ ಜಂಟಿ ಕಾರ್ಯದರ್ಶಿ ಟಿ.ಜಿ. ಪ್ರೇಮಕುಮಾರ್, ಪರಿಷತ್ತಿನ ಜಿಲ್ಲಾ ಸಮಿತಿ ಅಧ್ಯಕ್ಷ ಡಾ. ಜೆ.ಸೋಮಣ್ಣ, ಸಮಿತಿ ಉಪಾಧ್ಯಕ್ಷ ಎಂ.ಇ. ಮೊಹಿದಿನ್ ಮತ್ತಿತರರಿದ್ದರು.

ಸಂತೋಷ್‌ಕುಮಾರ್ ಸ್ವಾಗತಿ ಸಿದರು. ಎಚ್.ಬಿ. ದಿನೇಶ್ ಆಚಾರಿ ವಂದಿಸಿದರು.

                                                                                                                                        

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News