×
Ad

ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿದಾಗ ಅಭಿವೃದ್ಧಿ ಸಾಧ್ಯ: ಜಿಪಂ ಸದಸ್ಯ ಶಿವಲಿಂಗೇಗೌಡ

Update: 2016-09-30 22:25 IST

ಸೊರಬ, ಸೆ.30: ಸಮಾಜದಲ್ಲಿ ಶಿಕ್ಷಕರಿಗೆ ಗೌರವವಿದೆ. ಶಿಕ್ಷಕರು ತಮ್ಮ ಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಜಿಪಂ ಸದಸ್ಯ ಶಿವಲಿಂಗೇಗೌಡ ಹೇಳಿದರು.

ತಾಲೂಕು ವಿಶ್ವ ಮಾನವ ಶಕ್ತಿ ಶೋಧಕ ಸಮಾಜ ಟ್ರಸ್ಟ್ ಹಾಗೂ ಆಲಹಳ್ಳಿ ಬಂಕವಳ್ಳಿ ಗ್ರಾಮಸ್ಥರು,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದಲ್ಲಿ ಆಲಹಳ್ಳಿ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ರಾಷ್ಟ್ರ, ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ, ಸಾಧಕ ಶ್ರಮಜೀವಿ ಶಿಕ್ಷಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮಸ್ಥರಾದ ಪ್ರದೀಪ್‌ಗೌಡ ಎಸ್.ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಆನವಟ್ಟಿ ಜಿಪಿಯು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಜಯಪ್ಪ ಸೇರಿದಂತೆ ಅನೇಕ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ತಾಪಂ ಸದಸ್ಯ ವಿಜಯಕುಮಾರ್, ಕಮಲಕುಮಾರ್, ಗ್ರಾಪಂ ಅಧ್ಯಕ್ಷೆ ಕಲ್ಪನಾ ಲೋಕಪ್ಪ, ಉಪಾಧ್ಯಕ್ಷ ವೃಷಭೇಂದ್ರ, ಸದಸ್ಯ ಪರಶುರಾಮ್, ಸದಾಶಿವ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News