×
Ad

ಹೋರಾಟದಿಂದ ಸಮಾಜದಲ್ಲಿ ಬದಲಾವಣೆ: ಸಚಿವ ರೈ

Update: 2016-10-01 00:19 IST

ಮಂಗಳೂರು, ಸೆ.30: ಹೋರಾಟಗಳಿಂದ ಸಾಮಾಜಿಕ ಬದ ಲಾವಣೆ ಸಾಧ್ಯ. ಸಾಮಾಜಿಕ ಹೋರಾಟಗಾರರನ್ನು ನೆನಪಿಸುವ, ಅವರ ಕಾರ್ಯವನ್ನು ಗುರುತಿಸುವ ಕೆಲಸ ಅತ್ಯಗತ್ಯ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅಭಿಪ್ರಾಯಿಸಿದ್ದಾರೆ.

ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಸಂಘದ ದ.ಕ. ಜಿಲ್ಲಾ ಸಮಿತಿ ವತಿಯಿಂದ ನಗರದ ಎನ್‌ಜಿಒ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಸಂಘದ ರಾಜ್ಯಾಧ್ಯಕ್ಷ ಮಾರುತಿ ಮಾನ್ಪಡೆಯವರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದ.ಕ. ಜಿಪಂ ಉಪಕಾರ್ಯದರ್ಶಿ ಎನ್.ಆರ್.ಉಮೇಶ್ ಕಾರ್ಯಕ್ರಮ ಉದ್ಘಾಟಿಸಿದರು. ಸಂಘದ ಜಿಲ್ಲಾಧ್ಯಕ್ಷ ಕೆ.ಯಾದವ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಳಿಕ ಮಾರುತಿ ಮಾನ್ಪಡೆಯವರನ್ನು ಸನ್ಮಾನಿಸಲಾಯಿತು. ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸಂಘದ ಪ್ರಧಾನ ಕಾರ್ಯದರ್ಶಿ ರಘು ಸುಬ್ರಹ್ಮಣ್ಯ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News