ಇಂದು ಮತದಾರರ ಕರಡು ಪಟ್ಟಿ ಪ್ರಕಟ
ಉಡುಪಿ, ಸೆ.30: ಉಡುಪಿ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಬೈಂದೂರು, ಕುಂದಾಪುರ, ಉಡುಪಿ, ಕಾಪು ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದ ಮತದಾರರ ಕರಡುಪಟ್ಟಿಯು ಅ.1ರಂದು ಸಿಇಒ (ceo.karnataka.nic.in) ವೆಬ್‌ಸೈಟ್‌ನಲ್ಲಿ ಹಾಗೂ ಮತಗಟ್ಟೆ ಮಟ್ಟದಲ್ಲಿ ಪ್ರಕಟವಾಗಲಿದೆ. ಮತದಾರರು ಈ ಪಟ್ಟಿಯನ್ನು ಪರಿಶೀಲಿಸಿ ತಮ್ಮ ಹೆಸರು ಇರುವುದನ್ನು ದೃಢಪಡಿಸಿಕೊಳ್ಳುವಂತೆ ಕೋರಲಾಗಿದೆ. ಈ ಕರಡು ಪಟ್ಟಿಯಲ್ಲಿ ಮತದಾರನ ಹೆಸರು ನೋಂದಣಿ ಆಗದೆ ಇದ್ದಲ್ಲಿ 2017ರ ಜನವರಿ 1ಕ್ಕೆ 18 ವರ್ಷ ಪೂರ್ಣಗೊಳ್ಳುವ ಅರ್ಹ ನಾಗರಿಕರು ಅ.1ರಿಂದ ಅ.31ರ ಅವಧಿಯಲ್ಲಿ ನಮೂದಿತ ನಮೂನೆ 6ರಲ್ಲಿ ಸಂಬಂಧಪಟ್ಟ ಕ್ಷೇತ್ರದ ಮತಗಟ್ಟೆ ಹಂತದ ಅಧಿಕಾರಿಗೆ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಹೆಸರು, ವಿಳಾಸ ಇತ್ಯಾದಿಗಳ ಲೋಪದೋಷಗಳನ್ನು ತಿದ್ದುಪಡಿ ಮಾಡಿಸಿಕೊಳ್ಳಲು ನಮೂನೆ 8 ಮತ್ತು ಮತದಾರ ಪಟ್ಟಿಯಲ್ಲಿ ಹೆಸರುಗಳನ್ನು ತೆಗೆಯಲು ನಮೂನೆ 7ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿಗಳನ್ನು www.voterreg.kar.nic.in ರಲ್ಲಿ ಆನ್‌ಲೈನ್ ಮೂಲಕ ಸಲ್ಲಿಸಿ, ಅವುಗಳ ಪ್ರಿಂಟ್‌ಔಟ್‌ಗಳನ್ನು ಡೌನ್‌ಲೋಡ್ ಮಾಡಿ 7 ದಿನಗಳೊಳಗೆ ಜಿಲ್ಲಾ ಚುನಾವಣಾಧಿಕಾರಿ, ರಜತಾದ್ರಿ ಮಣಿಪಾಲ ಇಲ್ಲಿಗೆ ಸಲ್ಲಿಸಬಹುದು.