×
Ad

ಮೂಡುಬಿದಿರೆಯಲ್ಲಿ ಸ್ವಚ್ಛತಾ ಆಂದೋಲನಕ್ಕೆ ಚಾಲನೆ

Update: 2016-10-01 13:39 IST

ಮೂಡುಬಿದಿರೆ, ಅ.1: ಇಲ್ಲಿನ ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್ ಟೌನ್, ತಹಶೀಲ್ದಾರ್ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಆರಕ್ಷಕ ಠಾಣೆ, ಪುರಸಭೆ ಮೂಡುಬಿದಿರೆ ಹಾಗೂ ಇಂಟರ್ಯಾಕ್ಟ್ ಕ್ಲಬ್‌ಗಳ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ನಡೆದ ಸ್ವಚ್ಛತಾ ಆಂದೋಲನ ಕಾರ್ಯಕ್ರಮವು ಶನಿವಾರ ನಡೆಯಿತು.

ಕಲ್ಲಬೆಟ್ಟು ಎಕ್ಸಲೆಂಟ್ ಪ.ಪೂ ಕಾಲೇಜಿನಲ್ಲಿ ಮತ್ತು ಮಹಾವೀರ ಕಾಲೇಜಿನಲ್ಲಿ ಪುರಸಭಾಧ್ಯಕ್ಷೆ ರೂಪಾ ಎಸ್.ಶೆಟ್ಟಿ ಸ್ವಚ್ಛತಾ ಆಂದೋಲನಕ್ಕೆ ಚಾಲನೆ ನೀಡಿ, ವಿದ್ಯಾರ್ಥಿ ಜೀವನದಲ್ಲಿಯೇ ಮಕ್ಕಳಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದರೆ ತಮ್ಮ ಮನೆ ಹಾಗೂ ಗ್ರಾಮಗಳ ಸ್ವಚ್ಛತೆಯ ಬಗ್ಗೆ ಅರಿವು ಮೂಡುತ್ತದೆ. ಆದ್ದರಿಂದ ಶಾಲಾ ಕಾಲೇಜುಗಳಲ್ಲಿ ಸ್ವಚ್ಛತಾ ಆಂದೋಲನದಂತಹ ಕಾರ್ಯಕ್ರಮಗಳು ಅರ್ಥಪೂರ್ಣ ಎಂದು ಹೇಳಿದರು.

ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್ ಟೌನ್‌ನ ಅಧ್ಯಕ್ಷ ರಾಜೇಶ್ ಬಂಗೇರಾ, ಚಂದ್ರಹಾಸ ದೇವಾಡಿಗ, ಕಾಲೇಜಿನ ಅಧ್ಯಕ್ಷ ಯುವರಾಜ್ ಜೈನ್, ಮಹಾವೀರ ಕಾಲೇಜಿನ ಪ್ರಾಂಶುಪಾಲ ಹೆಚ್. ಚಂದ್ರಶೇಖರ ದೀಕ್ಷಿತ್, ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಜೆ.ಜೆ.ಪಿಂಟೋ, ಮತ್ತಿತರರು ಈ ಸಂದರ್ಭದಲ್ಲಿದ್ದರು.

ರೋಟರಿ ಆಂಗ್ಲ ಮಾಧ್ಯಮ ಶಾಲೆ ಮತ್ತು ಬಿಆರ್‌ಪಿಯಲ್ಲಿ ತಹಶೀಲ್ದಾರ್ ಮುಹಮ್ಮದ್ ಇಸಾಕ್, ಜೈನ ಕಾಲೇಜು ಮತು ಮುಹಮ್ಮದೀಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪುರಸಭಾ ಮುಖ್ಯಾಧಿಕಾರಿ ಶೀನ ನಾಯ್ಕ, ಜೈನ್ ಪ್ರೌಢಶಾಲೆ, ಸೈಂಟ್ ಥೋಮಸ್ ಪ್ರೌಢಶಾಲೆ ಆಲಂಗಾರಿನಲ್ಲಿ ಮೂಡುಬಿದಿರೆ ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್, ವಿದ್ಯಾಗಿರಿ ಆಳ್ವಾಸ್ ಕಾಲೇಜಿನಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಮುಹಮ್ಮದ್ ಶರೀಫ್, ಮತ್ತು ಪ್ರಾಂತ್ಯ ಹೈಸ್ಕೂಲ್, ಹೋಲಿ ರೋಸರಿ ಶಾಲೆಯಲ್ಲಿ ಪ್ರಬಾರ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ರಾಜಶ್ರೀ ಚಾಲನೆ ನೀಡಿದರು.

ಶಾಲಾ ಕಾಲೇಜಿನ ವಿವಿಧ ವಿದ್ಯಾರ್ಥಿಗಳು ಸ್ವಚ್ಛತಾ ಆಂದೋಲನದಲ್ಲಿ ಪಾಲ್ಗೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News