ಉಪವಾಸ ನಿರತ ದೇವೇಗೌಡರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ
Update: 2016-10-01 15:23 IST
ಬೆಂಗಳೂರು,ಅ.1: ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ವಿರೋಧಿಸಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ದೇವೇಗೌಡ ಉಪವಾಸ ಸತ್ಯಾಗ್ರಹ ನಿರತ ಸ್ಥಳಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.
ಇಂದು ಬೆಳಗ್ಗೆ 6.30ಕ್ಕೆ ಗಾಂಧಿ ಬಜಾರ್ ಬಳಿಯಿರುವ ಕಾರಂಜಿ ಆಂಜನೇಯ ದೇವಸ್ಥಾನ, ಕೋಟೆ ವೆಂಕಟರಮಣ ದೇವಾಲಯಕ್ಕೆ ಪೂಜೆ ಸಲ್ಲಿಸಿ ವಿಧಾನಸೌಧದ ಬಳಿಯಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಗಾಂಧಿ ಪ್ರತಿಮೆ ಬಳಿ ಸತ್ಯಾಗ್ರಹ ಆರಂಭಿಸಿದ್ದರು.
ಜೆಡಿಎಸ್ ನ ಬಂಡಾಯ ಶಾಸಕರಾದ ಅಖಂಡ ಶ್ರೀನಿವಾಸ ಮೂರ್ತಿ, ಝಮೀರ್ ಅಹ್ಮದ್, ಎನ್ ಚಲುವರಾಯ ಸ್ವಾಮಿ ಅವರು ದೇವೇಗೌಡರನ್ನು ಭೇಟಿಯಾಗಿದ್ಧಾರೆ