ಹಾವೇರಿಯಲ್ಲಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶ
ಬೆಂಗಳೂರು/ ಹಾವೇರಿ ಅ.1: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಬಹಿರಂಗ ಸಮರ ಸಾರಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಹಾವೇರಿಯಲ್ಲಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಬೃಹತ್ ಸಮಾವೇಶ ನಡೆಸುವ ಮೂಲಕ ತಮ್ಮ ಶಕ್ತಿಯನ್ನು ಸಾಬೀತು ಮಾಡಿದ್ದಾರೆ.
ಇದು ‘ಬಿಎಸ್‌ವೈ ವಿರುದ್ಧ ಶಕ್ತಿ ಪ್ರದರ್ಶನ ಅಲ್ಲ’ ಎಂದು ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ. ಆದರೆ, ಸಿಎಂ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಈಶ್ವರಪ್ಪ, ಹಾವೇರಿಯಲ್ಲಿ ಬೃಹತ್ ದಲಿತ, ಹಿಂದುಳಿದವರ ಸಮಾವೇಶ ನಡೆಸಿದ್ದಾರೆ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮೂಲಕ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವುದು ನಮ್ಮ ಉದ್ದೇಶ ಎಂದು ಸ್ಪಷ್ಟಪಡಿಸಿದ್ದಾರೆ.ಾಂಗ್ರೆಸ್‌ಗೆ ಯೋಗ್ಯತೆ ಇಲ್ಲ: ರಾಜ್ಯದ ಜನತೆಗೆ ಕುಡಿಯುವ ನೀರು ನೀಡುವ ಕನಿಷ್ಠ ಯೋಗ್ಯತೆ ಇಲ್ಲದ ಕಾಂಗ್ರೆಸ್ ನೇತೃತ್ವದ ಸರಕಾರವನ್ನು ಕಿತ್ತೊಗೆಯುವುದು ಬ್ರಿಗೇಡ್‌ನ ಧ್ಯೇಯ. ದಲಿತ, ಹಿಂದುಳಿದ ವರ್ಗಗಳಿಗೆ ಬಿಜೆಪಿ ಸರಕಾರಕ್ಕಿಂತ ಹೆಚ್ಚಿನ ಮೊತ್ತವನ್ನು ಕಾಂಗ್ರೆಸ್ ವೆಚ್ಚ ಮಾಡಿರುವುದನ್ನು ಸಾಬೀತು ಮಾಡಿದರೆ ತಾನು ಸಿಎಂ ಸಿದ್ದರಾಮಯ್ಯ ಹೇಳಿದಂತೆ ಕೇಳುತ್ತೇನೆ ಎಂದು ಈಶ್ವರಪ್ಪ ಸವಾಲು ಹಾಕಿದರು.
ನಮ್ಮ ನಿರೀಕ್ಷೆಯನ್ನು ಮೀರಿ ಸಂಗೊಳ್ಳಿ ರಾಯಣ್ಣ, ಬಸವಣ್ಣ, ಕಿತ್ತೂರು ರಾಣಿ ಚೆನ್ನಮ್ಮನ ನಾಡಿನಲ್ಲಿ ಬ್ರಿಗೇಡ್ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ದಲಿತ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣ ನಮ್ಮ ಮೂಲ ಆಶಯ ಎಂದು ಈಶ್ವರಪ್ಪ ತಿಳಿಸಿದರು.