×
Ad

ಸದನ ನಿರ್ಣಯ ಪಾಲಿಸಲು ಸರ್ವಪಕ್ಷಸಭೆ ತೀರ್ಮಾನ

Update: 2016-10-02 00:19 IST

ಬೆಂಗಳೂರು, ಅ.1: ಕಾವೇರಿ ಜಲಾನಯನ ಪ್ರದೇಶದಲ್ಲಿರುವ ನಾಲ್ಕು ಜಲಾಶಯಗಳಲ್ಲಿನ ನೀರನ್ನು ಕುಡಿಯಲು ಮಾತ್ರ ಬಳಸಿಕೊಳ್ಳಲು ವಿಧಾನಮಂಡಲದ ಉಭಯ ಸದನಗಳಲ್ಲಿ ಕೈಗೊಂಡಿರುವ ನಿರ್ಣಯವನ್ನು ಪಾಲಿಸಲು ನಿರ್ಧರಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಸುಪ್ರೀಂಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ. ಆದುದರಿಂದ, ಸದನದಲ್ಲಿ ನಾವು ಕೈಗೊಂಡಿರುವ ನಿರ್ಣಯಕ್ಕೆ ಬದ್ಧವಾಗಿರುವಂತೆ ಸರಕಾರಕ್ಕೆ ಸಲಹೆ ನೀಡಿದ್ದೇವೆ ಎಂದು ಅವರು ಹೇಳಿದರು.
ಕಾವೇರಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ಮಧ್ಯಪ್ರವೇಶ ಮಾಡುವಂತೆ ಪ್ರಧಾನಮಂತ್ರಿ ನರೇಂದ್ರಮೋದಿ ಮೇಲೆ ಒತ್ತಡ ಹೇರಲು ನಾವು ಸಿದ್ಧವಿದ್ದೇವೆ. ಅಲ್ಲದೆ, ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಲು ನಾವು ವಿರೋಧ ವ್ಯಕ್ತಪಡಿಸುತ್ತೇವೆ ಎಂದು ಜಗದೀಶ್‌ಶೆಟ್ಟರ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News