×
Ad

ಉಡುಪಿ ಮೂಲದ ಇಂಜಿನಿಯರ್ ಸಲೀಂರಿಗೆ ‘ಅಭಿಯಂತರ ಶ್ರೀ’ ಪ್ರಶಸ್ತಿ

Update: 2016-10-02 11:06 IST

ಕತಾರ್, ಅ.2: ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನೋತ್ಸವದ ಅಂಗವಾಗಿ ಕತರ್ ಕರ್ನಾಟಕ ಸಂಘದ ವತಿಯಿಂದ ಇಂಜಿನಿಯರ್ಸ್ ದಿನಾಚರಣೆಯನ್ನು ಕತರ್ ನ ಇಂಡಿಯನ್ ಕಲ್ಚರಲ್ ಸೆಂಟರ್ ನಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಮೂಲದ ಇಂಜಿನಿಯರ್ ಸಲೀಂ ಅವರಿಗೆ ‘ಅಭಿಯಂತರ ಶ್ರೀ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕತಾರ್ ಕರ್ನಾಟಕ ಸಂಘದ ಅಧ್ಯಕ್ಷ ಮಧು, ಇಂಡಿಯನ್ ಕಲ್ಚರಲ್ ಸೆಂಟರ್ ನ ಅಧ್ಯಕ್ಷ ಗಿರೀಶ್, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ವರದಿ: ಇಕ್ಬಾಲ್ ಮನ್ನಾ, ಉಡುಪಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News