ನಾಳೆ ರಾಜ್ಯ ವಿಧಾನ ಮಂಡಲದ ವಿಶೇಷ ಅಧಿವೇಶನ
Update: 2016-10-02 11:59 IST
ಬೆಂಗಳೂರು, ಅ.2: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿ ವಿಧಾನ ಮಂಡಲದ ವಿಶೇಷ ಅಧಿವೇಶನ ಸೋಮವಾರ ಬೆಳಗ್ಗೆ 11:00 ಗಂಟೆಗೆ ನಡೆಯಲಿದೆ.
ವಿಶೇಷ ಅಧಿವೇಶನದಲ್ಲಿ ಶಾಸಕರು ಕಡ್ಡಾಯವಾಗಿ ಸದನದಲ್ಲಿ ಹಾಜರಿರುವಂತೆ ಆಡಳಿತ ಪಕ್ಷದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಅವರು ಕಾಂಗ್ರೆಸ್ ಶಾಸಕರಿಗೆ ವಿಪ್ ಜಾರಿಗೊಳಿಸಿದ್ದಾರೆ.