ಸಂಚಾರ ನಿಯಮ ಉಲ್ಲಂಘನೆ: 563 ಪ್ರಕರಣ ದಾಖಲು

Update: 2016-10-03 07:50 GMT

ಮಂಗಳೂರು, ಅ.3: ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಪ್ರಯಾಣಿಸುತ್ತಿದ್ದ 563 ಪ್ರಕರಣಗಳನ್ನು ಪತ್ತೆ ಹಚ್ಚಿರುವ ಮಂಗಳೂರು ದಕ್ಷಿಣ ವಿಭಾಗದ ಪೊಲೀಸರು ಅಂತಹ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
    ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಜಂಕ್ಷನ್ , ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಮಹಾಕಾಳಿಪಡ್ಪು, ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಡಿಪು, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಾಮಂಜೂರು, ಪರಾರಿ ಮತ್ತು ಕುಡುಪುವಿನಲ್ಲಿ ಸಂಚಾರ ನಿಯಮವನ್ನು ಉಲ್ಲಂಘಿಸಿದವರ ಮೇಲೆ ಪ್ರಕರಣವನ್ನು ದಾಖಲಿಸಲಾಗಿದೆ.
   ಇದರಲ್ಲಿ 273 ಹೆಲ್ಮೆಟ್ ಇಲ್ಲದೆ ಪ್ರಯಾಣ, 69 ವಾಹನಗಳಿಗೆ ಟಿಂಟ್ ಗ್ಲಾಸ್ ಅಳವಡಿಸಿರುವುದು ಮತ್ತು 46 ವಿರುದ್ಧ ದಿಕ್ಕಿನಲ್ಲಿ ಸಂಚಾರದ ಪ್ರಕರಣಗಳು ಸೇರಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News