ಅ.12ರಿಂದ ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳಿಗೆ ಅವಕಾಶವಿಲ್ಲ!
Update: 2016-10-04 17:08 IST
ಮಂಗಳೂರು, ಅ.4: ಸ್ಮಾರ್ಟ್ ಸಿಟಿಗೆ ಆಯ್ಕೆಗೊಂಡಿರುವ ಮಂಗಳೂರು ನಗರದಲ್ಲಿ ಹಾಕಲಾಗಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳನ್ನು ಅಕ್ಟೋಬರ್ 12ರಿಂದ ತೆರವುಗೊಳಿಸುವ ಕಾರ್ಯವನ್ನು ಮಂಗಳೂರು ಮಹಾನಗರ ಪಾಲಿಕೆ ಆರಂಭಿಸಲಿದೆ ಎಂದು ಮೇಯರ್ ಹರಿನಾಥ್ ತಿಳಿಸಿದ್ದಾರೆ. ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಈ ಪ್ರತಿಕ್ರಿಯೆ ನೀಡಿದ ಅವರು, ನವರಾತ್ರಿಯ ನಿಮಿತ್ತ ಕೆಲವೊಂದು ಫ್ಲೆಕ್ಸ್, ಬ್ಯಾನರ್‌ಗಳನ್ನು ಅಳವಡಿಸಲಾಗಿದೆ. ಆದ್ದರಿಂದ ನವರಾತ್ರಿ ಕೊನೆಗೊಂಡ ಮಾರನೆ ದಿನದಿಂದಲೇ ಅವುಗಳನ್ನು ತೆರವುಗೊಳಿಸುವ ಕಾರ್ಯ ನಡೆಯಲಿದೆ ಎಂದರು.