×
Ad

ಐಸಿಸಿ ಟೆಸ್ಟ್ ರ್ಯಾಂಕಿಂಗ್: ವೃದ್ದಿಮಾನ್, ಭುವಿಗೆ ಭಡ್ತಿ

Update: 2016-10-04 23:48 IST

ದುಬೈ, ಅ.4: ನ್ಯೂಝಿಲೆಂಡ್ ವಿರುದ್ಧ ಕೋಲ್ಕತಾದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಗೆಲುವು ಸಾಧಿಸಲು ನೆರವಾಗಿದ್ದ ರೋಹಿತ್ ಶರ್ಮ, ವೃದ್ದಿಮಾನ್ ಸಹಾ ಹಾಗೂ ಭುವನೇಶ್ವರ್ ಕುಮಾರ್ ಮಂಗಳವಾರ ಬಿಡುಗಡೆಯಾಗಿರುವ ಐಸಿಸಿ ರ್ಯಾಂಕಿಂಗ್‌ನಲ್ಲಿ ಭಡ್ತಿ ಪಡೆದಿದ್ದಾರೆ.

ಟೆಸ್ಟ್‌ನ ಎರಡೂ ಇನಿಂಗ್ಸ್‌ಗಳಲ್ಲಿ ಅರ್ಧಶತಕ ಬಾರಿಸಿದ್ದ ಸಹಾ ಐಸಿಸಿ ಬ್ಯಾಟ್ಸ್‌ಮನ್‌ಗಳ ರ್ಯಾಂಕಿಂಗ್‌ನಲ್ಲಿ 18 ಸ್ಥಾನ ಮೇಲಕ್ಕೇರಿ 56ನೆ ಸ್ಥಾನದಲ್ಲಿದ್ದಾರೆ.

 ಎರಡನೆ ಇನಿಂಗ್ಸ್‌ನಲ್ಲಿ 82 ರನ್ ಗಳಿಸಿದ್ದ ರೋಹಿತ್ 14 ಸ್ಥಾನ ಭಡ್ತಿ ಪಡೆದು 38ನೆ ಸ್ಥಾನದಲ್ಲಿದ್ದಾರೆ. ಸರಣಿಯಲ್ಲಿ ಗರಿಷ್ಠ ಸ್ಕೋರರ್ ಎನಿಸಿಕೊಂಡಿರುವ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ 15ನೆ ಸ್ಥಾನದಲ್ಲಿದ್ದಾರೆ.

ಕಿವೀಸ್ ವಿರುದ್ಧದ ಎರಡೂ ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಆರಂಭಿಕ ಆಟಗಾರ ಮುರಳಿ ವಿಜಯ್ 21ನೆ ಸ್ಥಾನದಲ್ಲಿದ್ದಾರೆ.

ಆಸ್ಟ್ರೇಲಿಯದ ನಾಯಕ ಸ್ಟೀವನ್ ಸ್ಮಿತ್ ನಂ.1 ಸ್ಥಾನದಲ್ಲಿ ಮುಂದುವರಿದಿದ್ದಾರೆ. ಇಂಗ್ಲೆಂಡ್‌ನ ಜೋ ರೂಟ್ 2ನೆ ಸ್ಥಾನದಲ್ಲಿದ್ದಾರೆ.

ಮೊದಲ ಬಾರಿ 5 ವಿಕೆಟ್ ಗೊಂಚಲು ಪಡೆದಿದ್ದ ಮಧ್ಯಮ ವೇಗದ ಬೌಲರ್ ಭುವನೇಶ್ವರ್‌ಕುಮಾರ್ ಬೌಲರ್‌ಗಳ ರ್ಯಾಂಕಿಂಗ್‌ನಲ್ಲಿ 9 ಸ್ಥಾನ ಮೇಲಕ್ಕೇರಿ 26ನೆ ಸ್ಥಾನಕ್ಕೆ ಭಡ್ತಿ ಪಡೆದಿದ್ದಾರೆ. ಮುಹಮ್ಮದ್ ಶಮಿ 2 ಸ್ಥಾನ ಮೇಲಕ್ಕೇರಿ 23ನೆ ಸ್ಥಾನ ಪಡೆದಿದ್ದಾರೆ.

 ಆಲ್‌ರೌಂಡರ್ ರವೀಂದ್ರ ಜಡೇಜ ಒಂದು ಸ್ಥಾನ ಭಡ್ತಿ ಪಡೆದು 6ನೆ ಸ್ಥಾನದಲ್ಲಿದ್ದಾರೆ. ಇನ್ನೋರ್ವ ಸ್ಪಿನ್ನರ್ ಆರ್.ಅಶ್ವಿನ್ ಒಂದು ಸ್ಥಾನ ಕೆಳ ಜಾರಿ 3ನೆ ಸ್ಥಾನದಲ್ಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News