×
Ad

ಕೆರೆ-ರಾಜಕಾಲುವೆ ಒತ್ತುವರಿ ತೆರವಿಗೆ ಜಿಲ್ಲಾಡಳಿತ ವಿಫಲ

Update: 2016-10-05 21:55 IST

ಶಿವಮೊಗ್ಗ, ಅ.5: ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಕೆರೆ, ರಾಜಕಾಲುವೆ ಒತ್ತುವರಿ ತೆರವುಗೊಳಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎಂದು ಆರೋಪಿಸಿ ಅಣ್ಣಾ ಹಝಾರೆ ಹೋರಾಟ ಸಮಿತಿಯ ಕಾರ್ಯಕರ್ತರು ಬುಧವಾರ ನಗರದ ಡಿಸಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಸುಪ್ರೀಂಕೋರ್ಟ್‌ನ ಹಸಿರು ಪೀಠದ ಆದೇಶದ ಪ್ರಕಾರ ಕೆರೆ, ರಾಜಕಾಲುವೆ ಒತ್ತುವರಿಯಾಗಿದ್ದರೆ ತೆರವುಗೊಳಿಸಿ ಸಂರಕ್ಷಣೆ ಮಾಡಬೇಕಾಗಿರುವುದು ಆಡಳಿತಗಳ ಆದ್ಯ ಕರ್ತವ್ಯವಾಗಿದೆ. ಆದರೆ ಶಿವಮೊಗ್ಗ ನಗರದಲ್ಲಿ ಅವ್ಯಾಹತವಾಗಿ ಕೆರೆ, ರಾಜಕಾಲುವೆ ಒತ್ತುವರಿಯಾಗಿದೆ. ಆದರೆ ಒತ್ತುವರಿ ತೆರವುಗೊಳಿಸಿ ಸಂರಕ್ಷಣೆ ಮಾಡುವಲ್ಲಿ ಜಿಲ್ಲಾಡಳಿತ ನಿರ್ದಾಕ್ಷಿಣ್ಯ ಕ್ರಮ ಜರಗಿಸುತ್ತಿಲ್ಲ ಎಂದು ಧರಣಿನಿರತರು ಆರೋಪಿಸಿದ್ದಾರೆ. ನಗರದ ಎಲ್ಲ ರಾಜಕೀಯ ಪಕ್ಷದ ಪ್ರತಿನಿಧಿಗಳು ಕೆರೆ ಉಳಿವಿಗೆ ಬದ್ಧರಾಗಬೇಕು. ಹಾಗೆಯೇ ಜಿಲ್ಲಾಡಳಿತ ಕೂಡ ಕೆರೆ ಸಂರಕ್ಷಣೆಗೆ ಕಠಿಣ ಕ್ರಮ ಜರಗಿಸಬೇಕು. ಕೆರೆಗಳ ಸರ್ವೇ ನಡೆಸಿ, ಬಫರ್‌ರೆನ್ ನಿಗದಿ ಮಾಡಬೇಕು. ಕೆರೆ ಸಂರಕ್ಷಣೆ ಸಮಿತಿ ಸಭೆೆಯನ್ನು ಪ್ರತಿ ತಿಂಗಳು ಕಡ್ಡಾಯವಾಗಿ ನಡೆಸಬೇಕು. ಸಭೆೆಯಲ್ಲಿ ಭಾಗವಹಿಸಲು ಇಚ್ಛಿಸಿರುವ ಎಲ್ಲ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು ಆಹ್ವಾನಿಸಬೇಕು. ಹಸಿರು ಪೀಠದ ಆದೇಶದ ಪ್ರಕಾರ ಬಫರ್‌ರೆನ್ ನಿಗದಿಪಡಿಸಿ ಕಾನೂನು ರೀತಿಯಲ್ಲಿ ಕ್ರಮಕೈಗೊಳ್ಳಬೇಕೆಂದು ಧರಣಿನಿರತರು ಒತ್ತಾಯಿಸಿದ್ದಾರೆ. ಒಂದು ತಿಂಗಳಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಾಗಿರುವ ಕೆರೆ-ರಾಜಕಾಲುವೆ ಒತ್ತುವರಿ ತೆರವಿಗೆ ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಸಮಿತಿಯ ವತಿಯಿಂದ ನಗರದಲ್ಲಿ ಬೃಹತ್ ಕೆರೆ ಆಂದೋಲನ ಆಯೋಜಿಸಲಿದೆ ಎಂದು ಧರಣಿ ನಿರತರು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ. ಧರಣಿಯಲ್ಲಿ ಸಮಿತಿಯ ಗೌರವಾಧ್ಯಕ್ಷ ಡಾ. ಎನ್.ಎಲ್. ನಾಯಕ್, ಕಾರ್ಯಾಧ್ಯಕ್ಷ ಡಾ. ಬಿ.ಎಂ.ಚಿಕ್ಕಸ್ವಾಮಿ, ಪ್ರಧಾನ ಕಾರ್ಯದರ್ಶಿ ಟಿ.ಎಂ. ಅಶೋಕ್ ಯಾದವ್, ಸಂಘಟನಾ ಕಾರ್ಯದರ್ಶಿ ಶೇಖರ್ ಗೌಳೇರ್, ನಿರ್ದೇಶಕರಾದ ಜನಮೇಜಿ ರಾವ್, ಕಡಿದಾಳು ಶಾಮಣ್ಣ, ಪ್ರೊ. ಕಲ್ಲನ್ನವರ್, ಎಸ್.ಬಿ. ಅಶೋಕ್ ಕುಮಾರ್, ೂಪಾಳಂ ಶಿವಸ್ವಾಮಿ, ಬಾಬುರಾವ್ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News