ಪ್ರಧಾನಿ ಕರೆದಿರುವ ಸಭೆಗೆ ಹಾಜರಾಗುವೆ: ಸಿಎಂ

Update: 2016-10-06 14:23 GMT

ಮೈಸೂರು, ಅ.6- ಮಹದಾಯಿ ಯೋಜನೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಕ್ಟೋಬರ್ 21ರಂದು ಮುಂಬೈನಲ್ಲಿ 3 ರಾಜ್ಯಗಳ ಮುಖ್ಯಮಂತ್ರಿಗಳ ಸಬೆಯನ್ನು ಕರೆಯಲಾಗಿದ್ದು ತಾವು ಬಾಗವಹಿಸುತ್ತಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ತಮ್ಮ ಸ್ವಕ್ಷೇತ್ರ ವರುಣಾದಲ್ಲಿ ಕೈಗೆತ್ತಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲು ಶುಕ್ರವಾರ ಮೈಸೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕಳೆದ ಹಲವು ತಿಂಗಳಿನಿಂದ ಗೊಂದಲ್ಲಕ್ಕೆ ಕರಣವಾಗಿದ್ದ ಮಹದಾಯಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಮಾತುಕತೆ ಮೂಲಕ ಬಗೆ ಹರಿಸಿಕೊಳ್ಳಲು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಇದಕ್ಕೆ ಮಹರಾಷ್ಟ್ರ ಹಾಗೂ ಗೋವಾ ರಾಜ್ಯದ ಮುಖ್ಯಮಂತ್ರಿಗಳು ನೀರಿನ ಹಂಚಿಕೆಯ ಬಗ್ಗೆ ಚರ್ಚೆ ನಡೆಸಲು ಸಹಮತ ವ್ಯಕ್ತಪಡಿಸಿದ್ದಾರೆ. ನಾನು ಸಹ ಬಾಗವಹಿಸಿ ನೀರಿನ ಸಮಸ್ಯೆ ಹಾಗೂ ಬೆಳಗಾವಿ ಸೇರಿದಂತೆ ಇನ್ನಿತರ ಕಡೆ ಇರುವ ಗಡಿ ಸಮಸ್ಯೆಯನ್ನು ಪರಿಹರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

ಅದೇ ರೀತಿ ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಕೆ.ಆರ್‌ಎಸ್ ಜಲಾಶಯಕ್ಕೆ ಶುಕ್ರವಾರ ಕೇಂದ್ರದಿಂದ ತಜ್ಞರ ತಂಡ ಆಗಮಿಸಿ ಪರಿಶೀಲನೆ ನಡೆಸಲಿದೆ. ಈ ಸಂಬಂಧ ಕಾವೇರಿ ಕೊಳ್ಳದ ಪ್ರಾಂತ್ಯದಲ್ಲಿ ರೈತರು ಬೆಳೆದಿರುವ ಬೆಳೆಯ ಹಾನಿಯ ಬಗ್ಗೆ ವರದಿಯನ್ನು ಸಲ್ಲಿಸುವುದರ ಜೊತೆಗೆ ನೀರಿನ ಲ್ಯತೆಯನ್ನು ನಿಖರವಾಗಿ ತಿಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ.

ಬೆಳೆಗಳಿಗೆ ನೀರು ಬಿಡದ ಹಿನ್ನಲೆಯಲ್ಲಿ ಸುಮಾರು 51 ಸಾವಿರ ಹೆಕ್ಟೇರ್‌ನಲ್ಲಿ ಬೆಳೆ ಹಾನಿಯಾಗಿದೆ. ಕಳೆದ ವರ್ಷ ಮಳೆಯಿಲ್ಲದೆ ರಾಜ್ಯದ 126 ತಾಲ್ಲೂಕುಗಳಲ್ಲಿ ಬರದ ಛಾಯೆ ಆವರಿಸಿತ್ತು. ಆದರೇ ಈ ಬಾರಿ 110 ತಾಲ್ಲೂಕುಗಳು ಬರ ಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ. ಮಳೆ ಇಲ್ಲದೇ ಬರ ಪೀಡಿತವಾಗಿರುವ ಪ್ರದೇಶಗಗಳಿಗೆ ಹೆಚ್ಚಿನ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಇದರ ಜೊತೆಗೆ, ಮೇಕೆ ದಾಟು ಯೋಜನೆಯಲ್ಲಿ ಡಿಪಿಆರ್ ಯೋಜನೆಗಾಗಿ 5700 ಕೋಟಿ ಬಿಡುಗಡೆ ಮಾಡಲಾಗಿದೆ. ಮೇಕೆದಾಟು ಯೋಜನೆಯ ಮೂಲಕ ಬೆಂಗಳೂರು, ರಾಮನಗರ ಸೇರಿದಂತೆ ಇನ್ನಿತರ ಕಡೆಗೆ ಕುಡಿಯುವ ನೀರಿಗಾಗಿ ಯೋಜನೆ ರೂಪಿಸಲಾಗಿದೆ. ಜೊತೆಗೆ ವಿದ್ಯುತ್ ಉತ್ಪಾದಿಸಲು ನೀರನ್ನು ಬಳಕೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

ಜೊತೆಗೆ ಬರದಿಂದ ಬೆಳೆ ನಾಶವಾಗಿರುವ ಹಿನ್ನಲೆಯಲ್ಲಿ ಸಾಲಕ್ಕೆ ಹೆದರಿ ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು. ಆತ್ಮಹತ್ಯೆ ಸಮಸ್ಯೆಗೆ ಪರಿಹಾರವಲ್ಲ ಎಂದು ರೈತರಿಗೆ ಧೈರ್ಯ ಹೇಳಿದ ಸಿಎಂ ಬಲವಂತವಾಗಿ ಸಾಲ ವಸೂಲಿ ಮಾಡದಂತೆ ಬ್ಯಾಂಕ್‌ಗಳಿಗೆ ತಿಳಿಸಲಾಗಿದೆ. ಬಲಂತವಾಗಿ ಸಾಲ ವಸೂಲಿ ಮಾಡುವುದಕ್ಕೆ ಮುಂದಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಹಕಾರ ಮಹದೇವ್ ಪ್ರಸಾದ್, ಸೇರಿದಂತೆ ಮೊದಲಾದವರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News