×
Ad

ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸುವಂತೆ ಆಗ್ರಹ

Update: 2016-10-06 22:17 IST

ಕಾರವಾರ, ಅ.6: ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಹೊರಗುತ್ತಿಗೆ ನೌಕರರನ್ನು ಖಾಯಂ ಆಗಿ ನೇಮಕ ಮಾಡಿಕೊಳ್ಳುವಂತೆ ಆಗ್ರಹಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹೊರಗುತ್ತಿಗೆ ನೌಕರರು, ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಮಿತಿಯ ಅಧ್ಯಕ್ಷ ಜೆ. ಆರ್. ಲೋಬೊ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.

ಕಳೆದ ಎಂಟು ವರ್ಷಗಳಿಂದ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಈ ಕೆಲಸದಿಂದ ತೆಗೆದು, ನೇರ ನೇಮಕಾತಿ ಮಾಡಿಕೊಳ್ಳುವುದಾಗಿ ತಿಳಿಸುತ್ತಿದ್ದಾರೆ. ಇದರಿಂದಾಗಿ ನೂರಾರು ಹೊರಗುತ್ತಿಗೆ ನೌಕರರು ನಿರ್ಗತಿಕರಾಗುತ್ತಾರೆ ಎಂದು ಮನವಿಯಲ್ಲಿ ಪ್ರಸ್ತಾಪಿಸಲಾಗಿದೆ.

ಸರಕಾರಿ ನಿಯಮಕ್ಕೆ ಹೊರಗುತ್ತಿಗೆ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ನೇರವಾಗಿ ನೇಮಕ ಮಾಡಿಕೊಳ್ಳಬೇಕು. ಹಾಗೂ ತಮ್ಮ ಬೇಡಿಕೆಗಳನ್ನು ಕೂಲಕಂಶವಾಗಿ ಪರಿಹರಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಏಕಾಏಕಿ ಕೆಲಸದಿಂದ ತೆಗೆದಲ್ಲಿ ನಮ್ಮ ಕುಟುಂಬ ನಿರ್ವಹಣೆ ನಿರ್ವಹಿಸುವುದು ಕಷ್ಟಕರವಾಗಲಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಸರಿಯಾದ ರೀತಿಯಲ್ಲಿ ಸಂಬಳವಿಲ್ಲದ್ದರೂ ಪ್ರಾಮಾಣಿಕವಾಗಿ ಇಲಾಖೆಯಲ್ಲಿ ದುಡಿಯುತ್ತಿದ್ದೇವೆ. ಪ್ರಥಮ ಆದ್ಯತೆ ಮೇಲೆ ನೇಮಕಾತಿ ಮಾಡಿಕೊಳ್ಳುವ ಕುರಿತು ಕ್ರಮ ವಹಿಸಬೇಕು ಎಂದು ಮನವಿಯಲ್ಲಿ ವಿನಂತಿಸಿಕೊಂಡಿದ್ದಾರೆ. ಮನವಿಯನ್ನು ಸ್ವೀಕರಿಸಿದ ಜೆ. ಆರ್. ಲೋಬೊ, ಈ ಬಗ್ಗೆ ಸರಕಾರದ ಗಮನಕ್ಕೆ ತಂದು ಕ್ರಮ ಕೈಗೊಳ್ಳುವಂತೆ ತಿಳಿಸುತ್ತೇವೆ ಎಂದು ಭರವಸೆಯನ್ನು ನೀಡಿದರು.

ಮನವಿ ಸಲ್ಲಿಸುವ ನಿಯೋಗದಲ್ಲಿ ಗಂಗಾಧರ್ ಆಗೇರ್, ಪ್ರದೀಪ ಮಡಿವಾಳ, ರವಿಕುಮಾರ್ ನಾಯ್ಕ, ಮಾಬ್ಳೇಶ್ವರ್ ನಾಯ್ಕ, ವಿದ್ಯಾ, ಶಾಮಲಾ ಕೋಳಂಬರ್, ಮಂಜುನಾಥ ಪಠಗಾರ್, ಕಲ್ಪನಾ ನಾಯ್ಕ ಹಾಗೂ ಮತ್ತಿತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News