ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ಅಬ್ದುರ್ರಹ್ಮಾನ್ ಯುನಿಕ್
Update: 2016-10-07 16:23 IST
ಉಪ್ಪಿನಂಗಡಿ, ಅ.7: ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಘಟಕದ ಕಾರ್ಯಾಧ್ಯಕ್ಷರನ್ನಾಗಿ ಯುವ ಜೆಡಿಎಸ್ ಮಾಜಿ ಅಧ್ಯಕ್ಷ ಅಬ್ದುರ್ರಹ್ಮಾನ್ ಯುನಿಕ್‌ರನ್ನು ನೇಮಕ ಮಾಡಲಾಗಿದೆ. ಜೆಡಿಎಸ್ ಪಕ್ಷದ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿಯವರ ಆದೇಶದಂತೆ ಜೆಡಿಎಸ್ ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಞಿ ವಿಟ್ಲ ಈ ನೇಮಕ ಮಾಡಿದ್ದಾರೆ. ಉದ್ಯಮಿಯಾಗಿರುವ ಅಬ್ದುರ್ರಹ್ಮಾನ್ ಯುನಿಕ್ 1992ರಲ್ಲಿ ಜೆಡಿಎಸ್‌ಗೆ ಸೇರ್ಪಡೆಗೊಂಡಿದ್ದು, ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಅಲ್ಲದೇ, ಹಲವು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.