ಬ್ಯಾರಿ ಭಾಷೆ ಓದುವ ಸ್ಪರ್ಧೆ ನಿರಂತರವಾಗಲಿ : ರಮೀಝಾ ಬಾನು
Update: 2016-10-07 19:30 IST
ಮಂಗಳೂರು, ಅ.7: ಮಹಿಳೆಯರಿಗೆ ಬ್ಯಾರಿ ಭಾಷೆ ಓದುವ ಸ್ಪರ್ಧೆ ಆಯೋಜಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಇದು ನಿರಂತರವಾಗಿರಲಿ. ಇದರಿಂದ ನಮ್ಮ ಮಕ್ಕಳಿಗೆ ಬ್ಯಾರಿ ಭಾಷೆಯ ಬಗ್ಗೆ ಅಭಿಮಾನ ಬೆಳೆಯಲು ಸಾಧ್ಯ ಎಂದು ಕಾರ್ಪೊರೇಟರ್ ರಮೀಝಾ ಬಾನು ಹೇಳಿದರು.
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಬ್ಯಾರಿ ಭಾಷಾ ಸಪ್ತಾಹದ ಅಂಗವಾಗಿ ಅಕಾಡೆಮಿಯ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ 'ಮಹಿಳೆಯರಿಗೆ ಬ್ಯಾರಿ ಭಾಷೆ ಓದುವ ಸ್ಪರ್ಧೆ'ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿಯ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್ ವಹಿಸಿದ್ದರು. ಸಾಹಿತಿಗಳಾದ ಮರಿಯಮ್ ಇಸ್ಮಾಯೀಲ್, ರುಕ್ಸಾನ ಉಮರ್ ಉಪಸ್ಥಿತರಿದ್ದರು.
ಅಕಾಡಮಿಯ ರಿಜಿಸ್ಟ್ರಾರ್ ಉಮರಬ್ಬ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಕಾಡಮಿಯ ಸದಸ್ಯರಾದ ಅಬ್ದುಲ್ ಹಮೀದ್ ಗೋಳ್ತಮಜಲು ಸ್ವಾಗತಿಸಿದರು. ಮುಹಮ್ಮದ್ ಝಕರಿಯ ಕಲ್ಲಡ್ಕ ವಂದಿಸಿದರು. ಮುಹಮ್ಮದ್ ಶರೀಫ್ ನಿರ್ಮುಂಜೆ ಕಾರ್ಯಕ್ರಮ ನಿರೂಪಿಸಿದರು.