ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಸರಕಾರದ ಪ್ರಥಮ ಆದ್ಯತೆ: ಸಚಿವ ಕಾಗೋಡು

Update: 2016-10-07 16:51 GMT

ಸಾಗರ, ಅ. 7: ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸರಕಾರದ ಪ್ರಮುಖ ಆಶಯಗಳಲ್ಲಿ ಒಂದಾಗಿದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಸರಕಾರ ದೊಡ್ಡ ಪ್ರಮಾಣದಲ್ಲಿ ಅನುದಾನಗಳನ್ನು ನೀಡುತ್ತಿದ್ದು, ಇದರ ಸದ್ವಿನಿಯೋಗವಾಗಬೇಕು ಎಂದು ಸಚಿವ ಕಾಗೋಡು ತಿಮ್ಮಪ್ಪಹೇಳಿದರು.

 ನಗರದ ಬೆಳಲಮಕ್ಕಿ ಶಾಸಕರ ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಕ್ಕಳ ಕೈತೊಳೆಯುವ ದಿನಾಚರಣೆ, ಸಮುದಾಯದತ್ತ ಶಾಲೆ ಹಾಗೂ ಸಿ.ಸಿ. ಕ್ಯಾಮಾರಗಳನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸ್ವಚ್ಛತೆ ನಮ್ಮ ಮೊದಲ ಆದ್ಯತೆಯಾಗಬೇಕು. ಅಶುಚಿತ್ವದಿಂದ ಮಕ್ಕಳು ಅನೇಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಪದೇ ಪದೇ ಸಣ್ಣಪುಟ್ಟ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳ ಶೈಕ್ಷಣಿಕ ಗುಣಮಟ್ಟ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಜಾಗತಿಕವಾಗಿ ಇಂತಹ ದಿನವನ್ನು ಆಚರಿಸುವ ಮೂಲಕ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕೆಲಸ ಸರಕಾರ ಮಾಡುತ್ತಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲೂಕು ಪಂಚಾ ಯತ್ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಇತ್ತೀಚಿನ ದಿನಗಳಲ್ಲಿ ಮಕ್ಕಳಾದಿಯಾಗಿ ಹಿರಿಯರೂ ಸ್ವಚ್ಛತೆಯ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದರು.

 ವೇದಿಕೆಯಲ್ಲಿ ತಹಶೀಲ್ದಾರ್ ಎನ್.ಟಿ. ಧರ್ಮೋಜಿರಾವ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಟಿ.ಪಿ. ರಮೇಶ್, ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರಿವೀಕ್ಷಕ ಕೆ.ಎನ್. ಗಾವಡಿ, ಸಮನ್ವಯಾಧಿಕಾರಿ ಎನ್.ಎಚ್. ಯೋಗೀಶ್, ನಗರಸಭೆಯ ಪ್ರಭಾರಿ ಸಹಾಯಕ ಕಾರ್ಯಪಾಲಕ ಅಭಿಯಂತರ ಕೆ.ಎಚ್.ನಾಗಪ್ಪ, ರಾಮಪ್ಪ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ನಾಗರಾಜ ಮೊಗವೀರ, ನಗರಸಭೆ ಸದಸ್ಯ ಎನ್.ಶ್ರೀನಾಥ್, ಮುಖ್ಯ ಶಿಕ್ಷಕ ದಿನೇಶ್ ಮತ್ತಿತರರು ಉಪಸ್ಥಿತರಿದ್ದರು.

ಪೂರ್ಣಶ್ರೀ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಕಾರ್ಯನಿರ್ವಹಣಾಧಿಕಾರಿ ಸಿದ್ದಲಿಂಗಯ್ಯ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಲಿಂಗಪ್ಪವಂದಿಸಿದರು. ಜಯಮ್ಮ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಕೃಷ್ಣಮೂರ್ತಿ ನಿರ್ವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News