ವೀರಾಜಪೇಟೆ: ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ

Update: 2016-10-07 16:53 GMT

ವೀರಾಜಪೇಟೆ, ಅ.7: ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ವೀರಾಜಪೇಟೆ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಮಹತ್ತರ ಸಾಧನೆಗೈದಿದ್ದಾರೆ.

ಕಾಲೇಜಿನ ಬಾಲಕಿಯರ ಫುಟ್‌ಬಾಲ್ ತಂಡ ಬೀದರ್‌ನಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ದ್ವಿತೀಯ ಸ್ಥಾನ ಪಡೆದಿದೆ.

ಬಾಲಕಿಯರ ಕಬಡ್ಡಿ ತಂಡವು ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದೆ. ತಂಡದ ಸದಸ್ಯರಾದ ಚೈತ್ರಾ ಮತ್ತು ಅಕ್ಕಣಿ ರಾಜ್ಯ ಮಟ್ಟದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿದ್ದಾರೆ.

ಬಾಲಕರ ಥ್ರೋಬಾಲ್ ತಂಡ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಈ ತಂಡದ ಜಗದೀಶ್ ಮತ್ತು ತಿಲಕ್ ರಾಜ್ಯ ಮಟ್ಟದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿದ್ದಾರೆ. ಕಾಲೇಜಿನ ಮೇರಿ 1,500 ಮೀ. ಹಾಗೂ 3,000 ಮೀ. ಓಟದಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.

ಗುಡ್ಡಗಾಡು ಓಟದಲ್ಲಿ ಕಾಲೇಜಿನ ಜಗದೀಶ್ ಹಾಗೂ ತಿಲಕ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿ ಪೂಜಾ ಬಾಲಕಿಯರ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ರಾಜ್ಯ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾಳೆ.

ಯಾವುದೇ ದೈಹಿಕ ಶಿಕ್ಷಣ ಶಿಕ್ಷಕರ ತರಬೇತಿ ಇಲ್ಲದೆ ಕೇವಲ ಸಾಮಾನ್ಯ ವಿಷಯಗಳನ್ನು ಬೋಧಿಸುವ ಉಪನ್ಯಾಸಕರ ಮಾರ್ಗದರ್ಶನದಲ್ಲಿ ಸರಕಾರಿ ಕಾಲೇಜಿನ ವಿದ್ಯಾರ್ಥಿಗಳು ಈ ಮಟ್ಟದ ಸಾಧನೆಗೈದಿರುವುದು ವಿಶೇಷತೆಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News