ಉಕ್ಕಿನ ಮೇಲ್ಸೇತುವೆ ನಿರ್ಮಾಣ ವಿಚಾರ ಸರಕಾರ, ಬಿಡಿಎಗೆ ನೋಟಿಸ್
Update: 2016-10-07 23:39 IST
ಬೆಂಗಳೂರು, ಅ.7: ಬಸವೇಶ್ವರ ವೃತ್ತದಿಂದ ಹೆಬ್ಬಾಳದವರೆಗೂ ಉಕ್ಕಿನ ಮೇಲ್ಸೇತುವೆ ನಿರ್ಮಿಸಲು ಮುಂದಾಗಿರುವ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಪಟ್ಟಂತೆ ಹೈಕೋರ್ಟ್ ಸರಕಾರ ಮತ್ತು ಬಿಡಿಎಗೆ ನೋಟಿಸ್ ಜಾರಿ ಮಾಡಿದೆ.
ಈ ಸಂಬಂಧ ನಮ್ಮ ಬೆಂಗಳೂರು ಪ್ರತಿಷ್ಠಾನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ಆರ್. ಬಿ.ಬೂದಿಹಾಳ ಅವರಿದ್ದ ವಿಭಾಗಿಯ ನ್ಯಾಯಪೀಠ. ಈ ಆದೇಶ ನೀಡಿತು.
ಅರ್ಜಿದಾರರ ಪರ ವಾದಿಸಿದ ವಕೀಲರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದವರು, ಬಸವೇಶ್ವರ ವೃತ್ತದಿಂದ ಹೆಬ್ಬಾಳದವರೆಗೂ 1800 ಕೋಟಿ ರೂ.ವೆಚ್ಚದಲ್ಲಿ ಉಕ್ಕಿನ ಮೇಲ್ಸೇತುವೆೆಯನ್ನು ನಿರ್ಮಿಸಲು ಮುಂದಾಗುವ ಮೊದಲು ಸಾರ್ವಜನಿಕರ ಸಲಹೆ ಸೂಚನೆಗಳನ್ನು ಪಡೆಯಬೇಕು. ಆದರೆ, ಬಿಡಿಎದವರು ಈ ಯಾವುದೇ ಸಲಹೆ ಸೂಚನೆಗಳನ್ನು ಪಡೆಯದೇ ಉಕ್ಕಿನ ಮೇಲ್ಸೇತುವೆಯನ್ನು ನಿರ್ಮಿಸಲು ಮುಂದಾಗಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು