×
Ad

ಕಾಸರಗೋಡು: ಕೇಂದ್ರೀಯ ವಿಶ್ವವಿದ್ಯಾನಿಲಯದ ಹಾಸ್ಟೆಲ್ ಉದ್ಘಾಟನೆ

Update: 2016-10-08 17:47 IST

 ಕಾಸರಗೋಡು, ಅ.8: ಪೆರಿಯದಲ್ಲಿ ನಿರ್ಮಾಣಗೊಂಡಿರುವ ಕೇಂದ್ರೀಯ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ನ್ನು ಶನಿವಾರ ಉದ್ಘಾಟಿಸಲಾಯಿತು.

ಕೇಂದ್ರ ಮಾನವ ಸಂಪನ್ಮೂಲ ರಾಜ್ಯ ಸಚಿವ ಡಾ.ಮಹೇಂದ್ರನಾಥ್ ಪಾಂಡೆ ಹೊಸದಿಲ್ಲಿಯಿಂದ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟನೆ ನೆರವರಿಸಿದರು. ಒಂದು ವರ್ಷದೊಳಗೆ ಹಿಂದುಳಿದ  ದಲಿತ ವಿದ್ಯಾರ್ಥಿಗಳಿಗೆ ಎರಡು ವಸತಿ ನಿಲಯಗಳನ್ನು ನಿರ್ಮಿಸಲಾಗುವುದು ಎಂದು ಸಚಿವರು ಹೇಳಿದರು .

ಕೇಂದ್ರ ವಿಶ್ವವಿದ್ಯಾನಿಲಯವು ಎಲ್ಲರಿಗೂ ಗುಣಮಟ್ಟದ ಶಿಕ್ಷಣವನ್ನು ಖಾತರಿಪಡಿಸಲಿದೆ. ಜಿಲ್ಲೆಯ ಹಲವಡೆ ಕಾರ್ಯಾಚರಿಸುತ್ತಿರುವ ಎಲ್ಲಾ ಕ್ಯಾಂಪಸ್ ಗಳನ್ನು ಒಂದು ವರ್ಷದೊಳಗೆ ಪೆರಿಯ ಕ್ಯಾಂಪಸ್‌ಗೆ ಸ್ಥಳಾಂತರಿಸಲಾಗುವುದು ಎಂದರು.

ಕೇಂದ್ರೀಯ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಜಿ.ಗೋಪಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ರಾಜ್ಯ ಕಂದಾಯ ಸಚಿವ ಇ. ಚಂದ್ರಶೇಖರನ್, ಸಂಸದ ಪಿ.ಕರುಣಾಕರನ್, ಶಾಸಕ ಕೆ.ಕುಞಿರಾಮನ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದಾ ಎಸ್. ನಾಯರ್, ಡಾ. ಕೆ.ಜಯಪ್ರಸಾದ್ ಮಾತನಾಡಿದರು.

ಕೆ.ಪಿ. ಸುರೇಶ್ ಸ್ವಾಗತಿಸಿದರು. ಪಿ. ಶಶಿಧರನ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News