×
Ad

ಕ್ರೀಡೆ ಸಾಮಾಜಿಕ ಸಾಮರಸ್ಯಕ್ಕೆ ಪೂರಕ; ಮೀನಾಕ್ಷಿ ಶಾಂತಿಗೋಡು

Update: 2016-10-08 18:33 IST

ಪುತ್ತೂರು, ಅ.8: ಕ್ರೀಡೆ ಮನುಷ್ಯನ ದೈಹಿಕ ಬೆಳವಣಿಗೆ, ಶಿಸ್ತುಬದ್ಧ ಜೀವನ ರೂಢಿಸಿಕೊಳ್ಳಲು ನೆರವಾಗುತ್ತದೆ. ಜೊತೆಗೆ ಸಾಮಾಜಿಕ ಸಾಮರಸ್ಯಕ್ಕೆ ಪೂರಕವಾಗಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಹೇಳಿದ್ದಾರೆ.

ಪುತ್ತೂರು ತಾಲೂಕಿನ ನರಿಮೊಗರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮೂಹ ಸಂಪನ್ಮೂಲ ಕೇಂದ್ರ ಸವಣೂರು ಇದರ ವತಿಯಿಂದ ಶುಕ್ರವಾರ ನಡೆದ ಸವಣೂರು ವಲಯ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಇಂದಿರಾ ಬಿ.ಕೆ. ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯೆ ಪ್ರಮೀಳಾ ಜನಾರ್ಧನ, ತಾಲೂಕು ಪಂಚಾಯತ್ ಉಪಾಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ತಾಲೂಕು ಪಂಚಾಯತ್ ಸದಸ್ಯ ಪರಮೇಶ್ವರ ಭಂಡಾರಿ, ನರಿಮೊಗರು ಗ್ರಾಮ ಪಂಚಾಯತ್ ಅಧ್ಯಕ್ಷೆ ಚಂದ್ರಕಲಾ ಮುಕ್ವೆ ಅತಿಥಿಗಳಾಗಿ ಮಾತನಾಡಿದರು.

ಜಿಲ್ಲಾ ಪ್ರಶಸ್ತಿ ಪುರಸ್ಕೃತ ಪಟ್ಟೆ ಪ್ರತಿಭಾ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮೋನಪ್ಪ ಪಿ., ತಿಂಗಳಾಡಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ನಯನಾ ವಿ.ರೈ,ಅಂತಾರಾಷ್ಟ್ರೀಯ ಕ್ರೀಡಾಪಟು ಮುಕ್ವೆ ಶಾಲೆಯ ಶಿಕ್ಷಕಿ ವೇದಾವತಿ ಅವರನ್ನು ಸನ್ಮಾನಿಸಲಾಯಿತು.

ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಸುರೇಶ್ ಕುಮಾರ್, ಸ್ಥಳೀಯ ಪ್ರಮುಖರಾದ ಅರುಣ್ ಕುಮಾರ್ ಪುತ್ತಿಲ, ಸುಭಾಶ್ಚಂದ್ರ ಶೆಣೈ, ನರಿಮೊಗರು ಶಾಲಾ ಮುಖ್ಯಗುರು ವಿಜಯ ನಾಯಕ್, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಉಸ್ಮಾನ್ ನೆಕ್ಕಿಲು ಮತ್ತಿತರರು ಉಪಸ್ಥಿತರಿದ್ದರು.

ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಲತಾ ಸ್ವಾಗತಿಸಿದರು. ನರಿಮೊಗರು ಕ್ಲಸ್ಟರ್ ಸಿಆರ್‌ಪಿ ದೇವಪ್ಪ ವಂದಿಸಿದರು. ಸವಣೂರು ಕ್ಲಸ್ಟರ್ ಸಿಆರ್‌ಪಿ ವೆಂಕಟೇಶ ಅನಂತಾಡಿ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News