×
Ad

ಕಾವೇರಿ ನದಿ ರಕ್ಷಣೆಗೆ ಕೆಂದ್ರಕ್ಕೆ ಮನವಿ

Update: 2016-10-08 21:54 IST

 ಕುಶಾಲನಗರ, ಅ. 8: ಜೀವನದಿ ಕಾವೇರಿ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಕಾರ್ಯ ಯೋಜನೆಗಳನ್ನು ರೂಪಿಸಬೇಕೆಂದು ಆಗ್ರಹಿಸಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಪ್ರಧಾನ ಮಂತ್ರಿಯವರಿಗೆ ಮನವಿ ಪತ್ರವನ್ನು ಕೇಂದ್ರ ಜಲ ಮಂಡಳಿಯ ಮುಖಾಂತರ ಸಲ್ಲಿಸಿತು.

ಶನಿವಾರ ಹಾರಂಗಿ ಜಲಾಶಯದ ವಾಸ್ತವಾಂಶ ಅಧ್ಯಯನಕ್ಕೆ ಆಗಮಿಸಿದ್ದ ಸಂದರ್ಭ ಕೇಂದ್ರ ಜಲ ಆಯೋಗದ ಅಧಿಕಾರಿಗಳ ತಂಡವನ್ನು ಹಾರಂಗಿ ಪ್ರವಾಸಿ ಮಂದಿರದಲ್ಲಿ ಭೇಟಿ ಮಾಡಿದ ಸಮಿತಿಯ ಪ್ರಮುಖರು ಕಾವೇರಿ ನದಿ ಸಂರಕ್ಷಣೆಯ ಬಗ್ಗೆ ಮನವಿ ಸಲ್ಲಿಸಿದರು.

ದಕ್ಷಿಣ ಭಾರತದ ಜೀವನದಿಯಾಗಿರುವ ಕಾವೇರಿ ನದಿ ಹಲವಾರು ಕಾರಣಗಳಿಂದ ಕಲುಷಿತಗೊಳ್ಳುತ್ತಿದ್ದು, ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಕರ್ನಾಟಕದ ಕೊಡಗು ಜಿಲ್ಲೆಯ ತಲಕಾವೇರಿಯಿಂದ ಪ್ರಾರಂಭಗೊಂಡು ತಮಿಳುನಾಡಿನ ಪೂಂಪ್‌ಹಾರ್ ತನಕ ನದಿಯ ಸಂರಕ್ಷಣೆಯಾಗಬೇಕಾಗಿದೆ ಎಂದು ಮನವಿಯಲ್ಲಿದೆ.

ಅಲ್ಲದೆ, ಕೊಡಗು ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆಗೆ ಯೋಜನೆ ರೂಪಿಸಬೇಕು. ಉಪನದಿಗಳು ಹಾಗೂ ಕಾವೇರಿ ನದಿಯ ಅಭಿವೃದ್ಧಿಗೆ ಕೇಂದ್ರ ಸಹಕಾರ ನೀಡಬೇಕು. ಮತ್ತು ಕೊಡಗು ಜಿಲ್ಲೆಯ ಕಾವೇರಿ ನದಿ ತಟದ ಜನರ ಸಮಸ್ಯೆಗಳಿಗೆ ಕೇಂದ್ರ ಸ್ಪಂದನೆ ನೀಡಬೆಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

  ಮನವಿ ಸ್ವೀಕರಿಸಿದ ಮಾತನಾಡಿದ ಕೇಂದ್ರ ಜಲ ಆಯೋಗದ ಉಪ ನಿರ್ದೇಶಕ ಅಶೋಕ್ ಕುಮಾರ್, ಮನವಿಯನ್ನು ಆಯೋಗದ ಅಧ್ಯಕ್ಷರ ಮೂಲಕ ಪ್ರಧಾನಿಗಳಿಗೆ ಸಲ್ಲಿಸಲಾಗುವುದು. ಅಲ್ಲದೆ, ಈ ಬಗ್ಗೆ ಎಲ್ಲಾ ಮಾಹಿತಿಗಳನ್ನು ಕೇಂದ್ರ ಸರಕಾರದ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

ಕಾವೇರಿ ನದಿ ಸ್ವಚ್ಛತಾ ಆಂದೋಲನದ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ನೇತೃತ್ವದಲ್ಲಿ ಮನವಿ ಸಲ್ಲಿಸಿದ ನಿಯೋಗದಲ್ಲಿ ಸಮಿತಿಯ ಪ್ರಮುಖರಾದ ಡಿ.ಆರ್.ಸೋಮಶೇಖರ್, ಕೆ.ಜಿ.ಮನು, ಎಂ.ಡಿ.ಕೃಷ್ಣಪ್ಪ, ವೈಶಾಖ್, ಬಿ.ಡಿ.ಅಣ್ಣಯ್ಯ, ಪ್ರವೀಣ್, ಭಾಸ್ಕರ್‌ನಾಯಕ್ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News