ಪಡುಪಣಂಬೂರು ಬಳಿ ಭೀಕರ ಅಪಘಾತ
Update: 2016-10-09 22:07 IST
ಮುಲ್ಕಿ,ಅ.9: ರಾಷ್ಟ್ರೀಯ ಹೆದ್ದಾರಿ 66ರ ಪಡುಪಣಂಬೂರು ಬಳಿ ಕಾರಿಗೆ ಟಿಪ್ಪರ್ ಢಿಕ್ಕಿ ಹೊಡೆದು ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ರವಿವಾರ ನಡೆದಿದೆ.
ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಸ್ವಿಪ್ಟ್ ಕಾರಿಗೆ ಪಡುಪಣಂಬೂರು ಶನಿದೇವಸ್ಥಾನದ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಡುಪಿ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಢಿಕ್ಕಿ ಹೊಡೆಯಿತೆನ್ನಲಾಗಿದೆ.
ಢಿಕ್ಕಿಯ ರಭಸಕ್ಕೆ ಕಾರಿನ ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಚಾಲಕ ಸಹಿತ ನಾಲ್ವರು ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಮದು ತಿಳಿದು ಬಂದಿದೆ.
ಅಪಘಾತದಿಂದಾಗಿ ಸ್ವಲ್ಪಹೊತ್ತು ಹೆದ್ದಾರಿ ಸಂಚಾರ ವ್ಯತ್ಯಯಗೊಂಡಿದ್ದು ಉತ್ತರವಲಯ ಸಂಚಾರಿ ಪೊಲೀಸರು ಮತ್ತು ಸ್ಥಳೀಯರು ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವಲ್ಲಿ ಸಹಕರಿಸಿದ್ದಾರೆ. ಗಾಯಾಳುಗಳ ವಿವರ ಲಭ್ಯವಾಗಿಲ್ಲ.