ಅಕ್ರಮ ಮರಳುಗಾರಿಕೆ: 12 ಮಂದಿಯ ಬಂಧನ
Update: 2016-10-11 15:06 IST
ಮಂಗಳೂರು, ಅ.11: ಮಂಗಳೂರು ನಗರ ವ್ಯಾಪ್ತಿಯಲ್ಲಿ ಅಲ್ಲಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕಾ ಅಡ್ಡೆಗಳಿಗೆ ದಾಳಿ ನಡೆಸಿರುವ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.
ಜೆಪ್ಪಿನಮೊಗರು ಬಳಿ ಕಾರ್ಯಾಚರಿಸುತ್ತಿದ್ದ ಅಕ್ರಮ ಮರಳು ಅಡ್ಡೆಗೆ ದಾಳಿ ನಡೆಸಿದ ಮಂಗಳೂರು ದಕ್ಷಿಣ ವಿಭಾಗದ ಎಸಿಪಿ ನೇತೃತ್ವದ ಪೊಲೀಸರ ತಂಡ, 6 ಮಂದಿಯನ್ನು ಬಂಧಿಸಿದೆ. ಜೊತೆಗೆ ಎರಡು ಲಾರಿಗಳನ್ನು ಮತ್ತು ಒಂದು ಜೆಸಿಬಿ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ.
ಪಣಂಬೂರು ಬಳಿ ಕಾರ್ಯಾಚರಿಸುತ್ತಿದ್ದ ಮರಳು ಅಡ್ಡೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು 6 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜೊತೆಗೆ ಮರಳುಗಾರಿಕೆಗೆ ಬಳಸುತ್ತಿದ್ದ ಎರಡು ಲಾರಿಗಳು ಮತ್ತು ಎರಡು ಬೋಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.