×
Ad

ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆಯಾಗಿ ಶಾಲೆಟ್ ಪಿಂಟೋ ನೇಮಕ

Update: 2016-10-11 19:29 IST

ಮುಲ್ಕಿ, ಅ.11: ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಅಧ್ಯಕ್ಷೆಯಾಗಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಶಾಲೆಟ್ ಪಿಂಟೋ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಮತ್ತು ಕ್ಷೇತ್ರದ ಶಾಸಕರಾದ ಕೆ. ಅಭಯಚಂದ್ರ ಜೈನ್‌ಅವರ ಶಿಫಾರಸ್ಸಿನನ್ವಯ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸಿನ ಅಧ್ಯಕ್ಷೆಯಾದ ಶ್ರೀಮತಿ ಲಕ್ಷ್ಮೀ ಆರ್. ಹೆಬ್ಬಾಲ್ಕರ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

 ಯುವ ಕಾಂಗ್ರೆಸ್‌ನ ಮೂಲಕ ಮಹಿಳೆಯರನ್ನು ಸಂಘಟಿಸಿ, ದ.ಕ. ಜಿ. ಪಂ.ನ ಉಪಾಧ್ಯಕ್ಷರಾಗಿ ಜನ ಮನ್ನಣೆಗಳಿಸಿರುವ ಶಾಲೆಟ್, ವೃತ್ತಿಯಲ್ಲಿ ವಕೀಲೆಯಾಗಿದ್ದಾರೆ.

  ಇವರು ಮೂಲತಃ ಮಂಗಳೂರಿನವರಾಗಿದ್ದು, ಪ್ರಸ್ತುತ ಕಿನ್ನಿಗೋಳಿ ಮಹಿಳಾ ಸಹಕಾರಿ ಬ್ಯಾಂಕಿನ ಅಧ್ಯಕ್ಷೆಯಾಗಿ, ಕ್ರಿಶ್ಚಿಯನ್ ಮಹಿಳಾ ಕೋ.ಅಪರೇಟಿವ್ ಬ್ಯಾಂಕಿನ ನಿರ್ದೇಶಕಿಯಾಗಿ, ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿ ಹಾಗೂ ಇನ್ನರ್‌ವೀಲ್ ಸಂಸ್ಥೆಯ ಮಾಜಿ ಅಧ್ಯಕ್ಷೆಯಾಗಿ ಮತ್ತು ಎಮ್.ಸಿ.ಸಿ. ಬ್ಯಾಂಕಿನ ಮಾಜಿ ನಿರ್ದೇಶಕರಾಗಿರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News