ಟ್ಯಾಕ್ಟರ್‌ನಡಿಗೆ ಬಿದ್ದು ಕಾರ್ಮಿಕ ಮೃತ್ಯು
Update: 2016-10-11 20:59 IST
ಮಣಿಪಾಲ, ಅ.11: ಚಲಿಸುತ್ತಿದ್ದ ಟ್ಯಾಕ್ಟರ್ ಒಮ್ಮೆಲೆ ಬ್ರೇಕ್ ಹಾಕಿದ ಪರಿಣಾಮ ಅದರಲ್ಲಿ ಪ್ರಯಾಣಿಸುತ್ತಿದ್ದ ವಲಸೆ ಕಾರ್ಮಿಕರೊಬ್ಬರು ಆಯತಪ್ಪಿ ಕೆಳಗೆ ಚಕ್ರದಡಿಗೆ ಬಿದ್ದು ಮೃತಪಟ್ಟ ಘಟನೆ ನೆಲ್ಲಿಕಟ್ಟೆ ಕ್ರಾಸ್ ಬಳಿ ಇಂದು ಬೆಳಗ್ಗೆ 11:30ರ ಸುಮಾರಿಗೆ ನಡೆದಿದೆ.
ಮೃತರನ್ನುಶಾಸಪ್ಪ ಸಂಗಪ್ಪ ತಳವಾರ (32) ಎಂದು ಗುರುತಿಸಲಾಗಿದೆ. ಟ್ರಾಕ್ಟರನ್ನು ಅತಿವೇಗದಿಂದ ಚಲಾಯಿಸಿಕೊಂಡು ಬಂದ ಚಾಲಕ ಒಮ್ಮೆಲೇ ಬ್ರೇಕ್ ಹಾಕಿದ ಪರಿಣಾಮ ಟ್ರಾಕ್ಟರ್‌ನಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ಶಾಸಪ್ಪಸಂಗಪ್ಪತಳವಾರ ಟ್ರಾಕ್ಟರ್‌ನಿಂದ ಕೆಳಗೆ ಬಿದ್ದು ಚಕ್ರದ ಅಡಿ ಸಿಲುಕಿ ಗಂಭೀರವಾಗಿ ಗಾಯಗೊಂಡು ಉಡುಪಿ ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.