ಮಂಗಳೂರು:ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿ
Update: 2016-10-11 21:13 IST
ಮಂಗಳೂರು, ಅ.11: ನಗರದ ಜೆಪ್ಪಿನಮೊಗರು ಬಳಿ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಆಚೆ ಬದಿಯ ರಸ್ತೆಗೆ ಬಿದ್ದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಯವಾಗಿಲ್ಲ.
ತೊಕ್ಕೊಟ್ಟು ಕಡೆಯಿಂದ ಬರುತ್ತಿದ್ದ ಕಾರು ಜೆಪ್ಪಿನಮೊಗರು ಬಳಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿತ್ತು. ಅಲ್ಲಿಂದ ಪಕ್ಕದ ರಸ್ತೆಗೆ ಬಿದ್ದು ಅಲ್ಲೆ ಇದ್ದ ವಿದ್ಯುತ್ ಕಂಬದ ಮೇಲೆ ಬಿದ್ದಿದೆ. ವಿದ್ಯುತ್ ಕಂಬವು ಮುರಿದು ಬಿದ್ದಿದ್ದು ಕಾರು ಸಂಪೂರ್ಣ ಜಖಂಗೊಂಡಿದೆ. ಘಟನೆಯ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಕೆಲಸಮಯ ಅಸ್ತವ್ಯಸ್ತವಾಗಿತ್ತು. ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.