×
Ad

ಕ್ವಾರ್ಟರ್ ಫೈನಲ್ ತಲುಪಿದ ಜೊಕೊವಿಕ್

Update: 2016-10-13 23:23 IST

ಶಾಂೈ, ಅ.13: ವಿಶ್ವದ ನಂ.1 ಆಟಗಾರ ನೊವಾಕ್ ಜೊಕೊವಿಕ್ ಕೆನಡಾದ ವಸೆಕ್ ಪೊಸ್ಪಿಸಿಲ್ ಅವರನ್ನು 6-4, 6-4 ಸೆಟ್‌ಗಳಿಂದ ಸೋಲಿಸಿ ಶಾಂೈ ಓಪನ್ ಟೆನಿಸ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ತಲುಪಿದ್ದಾರೆ.

 ಗುರುವಾರ ಇಲ್ಲಿ ನಡೆದ ಪಂದ್ಯದಲ್ಲಿ 12 ಬಾರಿಯ ಗ್ರಾನ್‌ಸ್ಲಾಮ್ ಚಾಂಪಿಯನ್ ಜೊಕೊವಿಕ್ ಫಿಟ್‌ನೆಸ್ ಸಮಸ್ಯೆಯಿಂದ ಹೊರ ಬಂದು ಕೆನಡಾ ಆಟಗಾರನ ವಿರುದ್ಧ ಸುಲಭ ಜಯ ಸಾಧಿಸಿದರು.

ಜೊಕೊವಿಕ್ ಜೂನ್‌ನಲ್ಲಿ ಫ್ರೆಂಚ್ ಓಪನ್‌ನಲ್ಲಿ ಜಯ ಸಾಧಿಸಿದ ಬಳಿಕ ಸತತ ಸೋಲಿನಿಂದ ಕಂಗೆಟ್ಟಿದ್ದರು. ಇದೀಗ ಜೊಕೊವಿಕ್ ಒಂದೂ ಸೆಟ್ ಕಳೆದುಕೊಳ್ಳದೆ ಶಾಂೈ ಓಪನ್‌ನಲ್ಲಿ ಅಂತಿಮ 8ರ ಸುತ್ತನ್ನು ತಲುಪಿದ್ದಾರೆ. ಸೆಮಿ ಫೈನಲ್‌ನಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು 110ನೆ ರ್ಯಾಂಕಿನ ಮಿಸ್ಚಾ ಝ್ವೆರೆವ್‌ರನ್ನು ಎದುರಿಸಲಿದ್ದಾರೆ.

ಮತ್ತೊಂದು ಸಿಂಗಲ್ಸ್ ಪಂದ್ಯದಲ್ಲಿ ಮೊದಲ ಸೆಟ್ ಸೋಲಿನಿಂದ ಬೇಗನೆ ಚೇತರಿಸಿಕೊಂಡ ಅಮೆರಿಕದ ಜಾಕ್ ಸಾಕ್ ಕೆನಡಾದ ಮಿಲೊಸ್ ರಾವೊನಿಕ್‌ರನ್ನು 0-6, 6-4, 7-6(10/8) ನೇರ ಸೆಟ್‌ಗಳಿಂದ ಮಣಿಸಿದರು. ಈ ಮೂಲಕ ರಾವೊನಿಕ್ ವಿರುದ್ಧ ಸತತ 8 ಸೋಲಿನ ಸುಳಿಯಿಂದ ಹೊರ ಬಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News