10 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಪ್ರಸ್ತಾವನೆಗೆ ಸಿಎಂ ಸಮ್ಮತಿ
Update: 2016-10-14 15:41 IST
ಬೆಂಗಳೂರು, ಅ.14: 2016-17ನೆ ಸಾಲಿನಲ್ಲಿ ಹತ್ತು ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸುವ ಶಿಕ್ಷಣ ಇಲಾಖೆಯ ಪ್ರಸ್ತಾವನೆಗೆ ಸಿಎಂ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ.
ಇಂದು ನಡೆದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ, ಶಿಕ್ಷಕರ ನೇಮಕ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.