ನಿವೃತ್ತ ಐಎಎಸ್ ಅಧಿಕಾರಿ ಶಿವರಾಮ್ ಬಿಜೆಪಿ ಸೇರ್ಪಡೆ
Update: 2016-10-14 18:19 IST
ಬೆಂಗಳೂರು, ಅ.14: ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಮ್ ಇಂದು ಬಿಜೆಪಿ ಸೇರ್ಪಡೆಗೊಂಡರು.
ಬೆಂಗಳೂರಿನ ನ್ಯಾಶನಲ್ ಕಾಲೇಜು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ರಾಜ್‌ನಾಥ್ ಸಿಂಗ್ ಅವರು ಕೆ.ಶಿವರಾಮ್ ಅವರನ್ನು ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಸ್ವಾಗತಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವರುಗಳಾದ ಡಿ.ವಿ.ಸದಾನಂದ ಗೌಡ, ಅನಂತ ಕುಮಾರ‍್ ಮತ್ತಿತರರು ಉಪಸ್ಥಿತರಿದ್ದರು.
ಶಿವರಾಂ ಅವರು 2014ರ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. .
ಐಎಎಸ್ ಅಧಿಕಾರಿಯಾಗಿದ್ದ ಶಿವರಾಂ ನಿವೃತ್ತಿ ನಂತರ ರಾಜಕೀಯಕ್ಕೆ ಸೇರಿದ್ದರು.ಶಿವರಾಂ ಸ್ಯಾಂಡಲ್ ವುಡ್ ನಲ್ಲಿ ನಟರಾಗಿಯೂ ಮಿಂಚಿದ್ದರು.