ಮಾಜಿ ಸಚಿವ ವೀರಣ್ಣಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ

Update: 2016-10-14 14:13 GMT

ಬೆಂಗಳೂರು, ಅ. 14: ಬಡವರ ವಕೀಲನೆಂಬ ಖ್ಯಾತಿಗೆ ಪಾತ್ರರಾಗಿರುವ ಮಾಜಿ ಸಚಿವ ಕೊರಟಗೆರೆಯ ವೀರಣ್ಣ ಅವರಿಗೆ ಪ್ರಸಕ್ತ ಸಾಲಿನ ‘ಮಹರ್ಷಿ ವಾಲ್ಮೀಕಿ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಇಂದಿಲ್ಲಿ ಪ್ರಕಟಿಸಿದ್ದಾರೆ.

ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಶಸ್ತಿಯು 5 ಲಕ್ಷ ರೂ.ನಗದು, ಸ್ಮರಣಿಕೆ, ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ನಾಳೆ(ಅ.15) ಬೆಳಗ್ಗೆ 10:30ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಜರುಗಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆಂದು ಹೇಳಿದರು.

ತುಮಕೂರು ಜಿಲ್ಲೆ ಕೊರಟಗೆರೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ವೀರಣ್ಣ ಅವರು, ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಸಣ್ಣ ಉಳಿತಾಯ ಖಾತೆ ಸಚಿವರಾಗಿ ಸಣ್ಣ ಉಳಿತಾಯದಲ್ಲಿ ಕರ್ನಾಟಕ ರಾಜ್ಯವನ್ನು ನಂಬರ್ ಒನ್ ಸ್ಥಾನಕ್ಕೇರಿಸಿದ್ದರು ಎಂದ ಅವರು, ದೀನ ದಲಿತ ಶ್ರೇಯೋಭಿವೃದ್ದಿಗಾಗಿಯೂ ಅವರು ಅಪಾರ ಸೇವೆ ಸಲ್ಲಿಸಿದ್ದಾರೆ ಎಂದು ಸ್ಮರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News