ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿರಬೇಕು: ಸಚಿವ ರೈ

Update: 2016-10-14 14:23 GMT

ಮಂಗಳೂರು, ಅ.14: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯನ್ನು ವಿಭಜಿಸಿ ನೂತನವಾಗಿರಚಿಸಿದ ಕಂಕನಾಡಿ ನಗರ ಪೊಲೀಸ್ ಠಾಣೆಯನ್ನು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿರಬೇಕು. ಪೊಲೀಸ್ ಠಾಣೆಗಳು ವರ್ತಮಾನ, ಸಾಮಾಜಿಕ ಸಾಮರಸ್ಯಕ್ಕೆ ಒತ್ತು ನೀಡಬೇಕಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಜೆ.ಆರ್ ಲೋಬೊ ಮಾತನಾಡಿ, ಕಂಕನಾಡಿ ನಗರ ಪೊಲೀಸ್ ಠಾಣೆಯ ರಚನೆಗೆ ಹಿಂದಿನ ಗೃಹ ಸಚಿವ ಕೆ.ಜೆ.ಜಾರ್ಜ್ ಅವರಲ್ಲಿ ಮನವಿ ಮಾಡಲಾಗಿತ್ತು. ಅದಕ್ಕೆ ಸ್ಪಂದಿಸಿ ಅದನ್ನು ಮಂಜೂರು ಮಾಡಿದ್ದರು. ಮಂಗಳೂರು ಕಮಿಷನರ್ ಚಂದ್ರಶೇಖರ್ ಅವರ ಶ್ರಮದಿಂದ ಹೊಸ ಠಾಣೆ ಆಗಿದೆ ಎಂದು ಹೇಳಿದರು.

ಮಂಗಳೂರು ಕಮೀಷನರ್ ಚಂದ್ರಶೇಖರ್ ಮಾತನಾಡಿ, ಮಂಗಳೂರು ಗ್ರಾಮಂತರ ಪೊಲೀಸ್ ಠಾಣೆಯನ್ನು ಪಿಪಿಪಿ ರೀತಿಯಲ್ಲಿ ಮಾಡಲು ಯೋಜನೆ ರೂಪಿಸಲಾಗಿದೆ ಎಂದರು.

ವಿಧಾನಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ಮಾತನಾಡಿ, ಮಂಗಳೂರು ಗ್ರಾಮಾಂತರ ಠಾಣೆಯ ಹೊಸ ಕಟ್ಟಡ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ ಧನಸಹಾಯವನ್ನು ನೀಡಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಂಗಳೂರು ಉಪಪೊಲೀಸ್ ಆಯುಕ್ತ ಕೆ.ಎಂ ಶಾಂತರಾಜು, ಡಾ.ಸಂಜೀವ ಎಂ. ಪಾಟೀಲ್ ಉಪಸ್ಥಿತರಿದ್ದರು.

ಹೊಸ ಠಾಣೆ ವ್ಯಾಪ್ತಿಗೆ ಬರಲಿರುವ ಪ್ರದೇಶಗಳು

ಪದವು, ಅಳಪೆ, ಮರೋಳಿ, ಕಂಕನಾಡಿ , ಜೆಪ್ಪಿನಮೊಗರು, ಬಜಾಲ್, ಕಣ್ಣೂರು, ಆಡಂಕುದ್ರು ಪ್ರದೇಶಗಳು ಕಂಕನಾಡಿ ನಗರ ಠಾಣಾ ವ್ಯಾಪ್ತಿಗೆ ಸೇರಲಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News