ಅ.17ರಿಂದ ಬೆಸೆಂಟ್ ಕಾಲೇಜು, ಹಳೆವಿದ್ಯಾರ್ಥಿ ಸಂಘದಿಂದ ಅಂತರ್‌ಕಾಲೇಜು ಕಬಡ್ಡಿ ಪಂದ್ಯಾಟ

Update: 2016-10-15 13:43 GMT

ಮಂಗಳೂರು,ಅ.15:ಬೆಸೆಂಟ್ ಸಂಧ್ಯಾ ಕಾಲೇಜು ಹಾಗೂ ಬೆಸೆಂಟ್ ಸಂಧ್ಯಾ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘಗಳ ಜಂಟಿ ಆಶ್ರಯದಲ್ಲಿ ಅ.17ರಿಂದ 19ರವರೆಗೆ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಕಬಡ್ಡಿ ಪಂದ್ಯಾಟವನ್ನು ಉರ್ವ ಮಾರ್ಕೆಟ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದೆ ಬೆಸೆಂಟ್ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಲಕ್ಷ್ಮೀನಾರಾಯಣ್ ಭಟ್ ಹೇಳಿದರು.

ಅ.17ರ ಬೆಳಗ್ಗೆ 9:30ಕ್ಕೆ ಪಂದ್ಯಾಟದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಶಾಸಕ ಜೆ.ಆರ್.ಲೋಬೊ ಚಾಲನೆ ನೀಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಸಂಸದ ನಳಿನ್ ಕುಮಾರ್ ಕಟೀಲ್, ಪುರುಷೋತ್ತಮ್ ಕೊಟ್ಟಾರಿ, ಮಹಾಬಲ ಕೊಟ್ಟಾರಿ ಎಂ.ಎಂ., ಲಯನ್ ಕಿಶೋರ್ ಡಿ.ಶೆಟ್ಟಿ, ದ.ಕ.ಅಮ್ಮೆಚೂರ್ ಕಬಡ್ಡಿ ಅಸೋಸಿಯೇಶನ್‌ನ ಕಾರ್ಯದರ್ಶಿ ಪುರುಷೋತ್ತಮ್ ಪೂಜಾರಿ ಬಿ. ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಮಂಗಳೂರು ವಲಯದ ಸ್ಪರ್ಧೆಯಲ್ಲಿ ಮಂಗಳೂರು ಹಾಗೂ ಕೊಡಗು ಜಿಲ್ಲೆಯ ಒಟ್ಟು 46 ತಂಡಗಳು ಭಾಗವಹಿಸಲಿವೆ. ಮಂಗಳೂರು ವಲಯ ಸ್ಪರ್ಧೆಯ ಉನ್ನತ 4 ತಂಡಗಳು ಅಂತರ್ ವಲಯ ಪಂದ್ಯಾಟಕ್ಕೆ ಅರ್ಹತೆಯನ್ನು ಪಡೆದುಕೊಳ್ಳಲಿದೆ ಎಂದರು.

ಅ.18ರಂದು ಸ್ಪರ್ಧೆಯ ಸಮಾರೋಪ ಸಮಾರಂಭ ನಡೆಯಲಿದ್ದು, ವಿಜೇತ ತಂಡಗಳಿಗೆ ಬಹುಮಾನ ವಿತರಣೆ ಮಾಡಲಾಗುವುದು. ವುಮೆನ್ಸ್ ನ್ಯಾಷನಲ್ ಎಜುಕೇಷನ್ ಸೊಸೈಟಿಯ ಉಪಾಧ್ಯಕ್ಷ ಮಣೇಲ್ ಅಣ್ಣಪ್ಪ ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಮೇಯರ್ ಹರಿನಾಥ್, ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಅಧ್ಯಕ್ಷ ಮಂಜುನಾಥ್ ಭಂಡಾರಿ, ಲತೀಶ್ ಸುವರ್ಣ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಅ.19ರಂದು ಮಂಗಳೂರು ವಲಯ ಮತ್ತು ಉಡುಪಿ ವಲಯದ 8 ತಂಡಗಳು ನಡುವೆ ಸ್ಪರ್ಧೆ ನಡೆಯಲಿದೆ. ಇಲ್ಲಿ ವಿಜೇತರಾದ ತಂಡಕ್ಕೆ ರತ್ನವರ್ಮ ಹೆಗ್ಗಡೆ ಸ್ಮಾರಕ ಪಾರಿತೋಷಕ ನೀಡಿ ಗೌರವಿಸಲಾಗುವುದು. ಸಚಿವ ಯು.ಟಿ.ಖಾದರ್, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಶಾಸಕ ಮೊಯ್ದೀನ್ ಬಾವ ಮೊದಲಾದವರು ಭಾಗವಹಿಸಲಿದ್ದಾರೆ ಎಂದರು. ಸಂಜೆ 4.30ಕ್ಕೆ ಸಮಾರೋಪ ನಡೆಯಲಿದ್ದು, ಕಾಲೇಜಿನ ಸಂಚಾಲಕ ನಗರ್ ನಾರಾಯಣ್ ಶೆಣೈ ಅಧ್ಯಕ್ಷತೆ ವಹಿಸಲಿದ್ದಾರೆ. ಸಚಿವ ಪ್ರಮೋದ್ ಮಧ್ವರಾಜ್, ರಾಜಶ್ರೀ ಭಗಲಾರಿ, ಸುಜಿತ್ ಆಳ್ವ ಭಾಗವಹಿಸಲಿದ್ದಾರೆ ಎಂದು ಹೇಳಿದರು.

 ಸುದ್ದಿಗೋಷ್ಠಿಯಲ್ಲಿ ವುಮೆನ್ಸ್ ನ್ಯಾಷನಲ್ ಎಜ್ಯುಕೇಷನ್ ಸೊಸೈಟಿಯ ಅಧ್ಯಕ್ಷ ಕುಡ್ಪಿ ಜಗದೀಶ್ ಶೆಣೈ, ಸಂಚಾಲಕ ಹರೀಶ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News