×
Ad

ಸುಳ್ಯ: ಮಹರ್ಷಿ ವಾಲ್ಮೀಕಿ ಜಯಂತಿ

Update: 2016-10-15 23:40 IST

ಸುಳ್ಯ, ಅ.15: ತಾಲೂಕಿನ ನಾಡಹಬ್ಬಗಳ ದಿನಾಚರಣಾ ಸಮಿತಿಯ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯು ತಾಪಂ ಸಭಾಭವನದಲ್ಲಿ ಜರಗಿತು.
ರಾಜ್ಯ ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಾಪಂ ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಪ್ರತಿಭಾ ವಿದ್ಯಾಲಯದ ಪ್ರಾಂಶುಪಾಲ ವೆಂಕಟರಾಮ ಭಟ್ ವಾಲ್ಮೀಕಿ ಜಯಂತಿ ಕುರಿತು ಮಾತನಾಡಿದರು. ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ನಾಡಹಬ್ಬಗಳ ಸಮಿತಿ ಅಧ್ಯಕ್ಷ, ತಹಶೀಲ್ದಾರ್ ಎಂ.ಎಂ.ಗಣೇಶ್, ಸುಳ್ಯ ಸಬ್‌ಇನ್‌ಸ್ಪೆಕ್ಟರ್ ಚಂದ್ರಶೇಖರ್ ಉಪಸ್ಥಿತರಿದ್ದರು.
ಇಒ ಮಧುಕುಮಾರ್ ಸ್ವಾಗತಿಸಿದರು. ವೀರಪ್ಪ ಗೌಡ ಕಾರ್ಯಕ್ರಮ ನಿರೂಪಿಸಿದರು. ಪ್ರಭಾರ ಸಮಾಜ ಕಲ್ಯಾಣಾಧಿಕಾರಿ ಚಂದ್ರಶೇಖರ ಪೇರಾಲು ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News