ಬ್ರೆಜಿಲ್ ಅಧ್ಯಕ್ಷರೊಂದಿಗೆ ಮೋದಿ ಮಾತುಕತೆ

Update: 2016-10-17 11:05 GMT

ಬೆನಾಲಿಮ್(ಗೋವಾ),ಅ.17: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿಲ್ಲಿ ಬ್ರೆಜಿಲ್ ಅಧ್ಯಕ್ಷ ಮಿಷೆಲ್ ಟೆಮರ್ ಜೊತೆ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಿದರು.

ದ್ವಿಪಕ್ಷೀಯ ಸಂಬಂಧಗಳ ಸಮಗ್ರ ಆಯಾಮ ಮತ್ತು ಉಭಯ ರಾಷ್ಟ್ರಗಳ ನಡುವಿನ ಸಂಬಂಧವನ್ನು ಇನ್ನಷ್ಟು ಗಾಢಗೊಳಿಸಲು ಮಾರ್ಗೋಪಾಯಗಳನ್ನು ಉಭಯ ನಾಯಕರು ಚರ್ಚಿಸಿದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ವಿಕಾಸ ಸ್ವರೂಪ್ ಟ್ವೀಟಿಸಿದ್ದಾರೆ.

ಇದು ಬ್ರಿಕ್ಸ್ ರಾಷ್ಟ್ರಗಳ ನಾಯಕರೊಂದಿಗೆ ಮೋದಿಯವರು ನಡೆಸಿದ ಕೊನೆಯ ಸುತ್ತಿನ ಮಾತುಕತೆಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News