ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ತಂಡಗಳ ನಡುವೆ ಮಾರಾಮಾರಿ

Update: 2016-10-17 12:09 GMT

ಕೋಲಾರ, ಅ.17: ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಗುಂಪುಗಳೆರಡರ ನಡುವೆ ಮಾರಾಮಾರಿ ಸಂಭವಿಸಿದ ಘಟನೆ ಕೋಲಾರ ಜಿಲ್ಲಾಸ್ಪತ್ರೆಯ ಮುಂಭಾಗದಲ್ಲಿ ನಡೆದಿದೆ.

ಗೋಪಾಲಪ್ಪ, ಸತೀಶ್ ಹಾಗೂ ವೆಂಕಟೇಶಪ್ಪ ಹಲ್ಲೆಗೊಳಗಾದವರು ಎಂದು ತಿಳಿದುಬಂದಿದೆ. ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಹಲ್ಲೆ ನಡೆಸಿದ ದೃಶ್ಯ ಆಸ್ಪತ್ರೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಕೋಲಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News