ಹಿರಿಯ ನಾಗರಿಕರಿಗಾಗಿ ಕೇಂದ್ರದಿಂದ ಶೀಘ್ರವೇ ಹೊಸನೀತಿ ಜಾರಿ ಸಾಧ್ಯತೆ

Update: 2016-10-17 14:30 GMT

ವಡೋದರಾ,ಅ.17: ಸರಕಾರವು ಆರೋಗ್ಯ ರಕ್ಷಣೆ ಮತ್ತು ವಸತಿ ಸೌಲಭ್ಯಗಳನ್ನು ಮುಖ್ಯವಾಗಿಟ್ಟುಕೊಂಡು ಹಿರಿಯ ನಾಗರಿಕರಿಗಾಗಿ ಶೀಘ್ರವೇ ನೂತನ ರಾಷ್ಟ್ರೀಯ ನೀತಿಯೊಂದನ್ನು ಜಾರಿಗೆ ತರಬಹುದು ಎಂದು ಕೇಂದ್ರ ಸಚಿವ ಥಾವರಚಂದ್ ಗೆಹ್ಲೋಟ್ ಅವರು ಹೇಳಿದ್ದಾರೆ. ಈ ಸಂಬಂಧ ಪ್ರಸ್ತಾವನೆಯೊಂದನ್ನು ಈಗಾಗಲೇ ಪ್ರಧಾನಿ ನರೇಂದ್ರ ಮೋದಿಯವರ ಎದುರು ಇಡಲಾಗಿದೆ ಎಂದು ಇಲ್ಲಿ ಸುದ್ದಿಸಂಸ್ಥೆಗೆ ತಿಳಿಸಿದ ಅವರು,ಶೀಘ್ರವೇ ನಿರ್ಧಾರ ಹೊರಬೀಳುವ ಆಶಯವನ್ನು ವ್ಯಕ್ತಪಡಿಸಿದರು.

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಕೇಂದ್ರದ ಇತರ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳೊಂದಿಗೆ ಸಮಾಲೋಚಿಸಿ ಈ ಪ್ರಸ್ತಾವನೆಯನ್ನು ಸಿದ್ಧಗೊಳಿಸಿದೆ. ಬದಲಾಗುತ್ತಿರುವ ಜನಸಂಖ್ಯೆ ಮಾದರಿ, ಹಿರಿಯ ನಾಗರಿಕರ ಸಾಮಾಜಿಕ-ಆರ್ಥಿಕ ಅಗತ್ಯಗಳು ಮತ್ತು ಸಾಮಾಜಿಕ ವೌಲ್ಯ ವ್ಯವಸ್ಥೆಯನ್ನು ಅದು ಪರಿಗಣನೆಗೆ ತೆಗೆದುಕೊಂಡಿದೆ.

 ನೂತನ ನೀತಿಯು ದೇಶದ ಹಿರಿಯ ನಾಗರಿಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಲಿದೆ ಎಂದು ಗೆಹ್ಲೋಟ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News