×
Ad

ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ವಿಸ್ತರಣೆ

Update: 2016-10-17 23:56 IST

ಹೊಸದಿಲ್ಲಿ,ಅ.17: ಇಲ್ಲಿಯ ಪ್ರಸಿದ್ಧ ಹಾಜಿ ಅಲಿ ದರ್ಗಾದ ಕೇಂದ್ರಸ್ಥಾನಕ್ಕೆ ಮಹಿಳೆಯರ ಪ್ರವೇಶದ ಮೇಲಿನ ನಿಷೇಧವನ್ನು ರದ್ದುಗೊಳಿಸುವ ತನ್ನ ನಿರ್ಧಾರದ ವಿರುದ್ಧ ಮೇಲ್ಮನವಿಯನ್ನು ಸಲ್ಲಿಸಲು ಅನುಕೂಲವಾಗುವಂತೆ ಬಾಂಬೆ ಉಚ್ಚ ನ್ಯಾಯಾಲಯವು ತನ್ನ ಆದೇಶ ಜಾರಿಗೆ ನೀಡಿದ್ದ ತಡೆಯಾಜ್ಞೆಯನ್ನು ಸರ್ವೋಚ್ಚ ನ್ಯಾಯಾಲಯವು ಇಂದು ವಿಚಾರಣಾ ದಿನಾಂಕವಾದ ಅ.24ರವರೆಗೆ ವಿಸ್ತರಿಸಿತು.

ಪ್ರಕರಣ ಸೋಮವಾರ ವಿಚಾರಣೆಗೆ ಬಾರದ ಹಿನ್ನೆಲೆಯಲ್ಲಿ ಹಾಜಿ ಅಲಿ ದರ್ಗಾ ಟ್ರಸ್ಟ್‌ನ ವಕೀಲರು ಮುಂದಿನ ವಿಚಾರಣೆಯ ದಿನದವರೆಗೆ ತಡೆಯಾಜ್ಞೆಯನ್ನು ವಿಸ್ತರಿಸುವಂತೆ ಮಾಡಿಕೊಂಡ ಮನವಿಯನ್ನು ನ್ಯಾಯಾಲಯವು ಪುರಸ್ಕರಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News