ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್

Update: 2016-10-18 13:18 GMT

ಜಮ್ಮು,ಅ.18: ಪಾಕಿಸ್ತಾನಿ ಪಡೆಗಳು ಮತ್ತೆ ಕದನ ವಿರಾಮವನ್ನು ಉಲ್ಲಂಘಿಸಿವೆ. ರಾಜೌರಿ ಜಿಲ್ಲೆಯ ನೌಶೇರಾ ವಿಭಾಗದಲ್ಲಿ ಲಾಮ್ ಬಟಾಲಿಯನ್ ಪ್ರದೇಶದ ನಿಯಂತ್ರಣ ರೇಖೆಯಲ್ಲಿನ ಮುಂಚೂಣಿ ನೆಲೆಗಳತ್ತ ಗುಂಡಿನ ಮತ್ತು ಮಾರ್ಟರ್ ಬಾಂಬ್‌ಗಳ ದಾಳಿ ನಡೆಸಿದ್ದು, ಭಾರತೀಯ ಯೋಧರು ಪ್ರತಿದಾಳಿ ನಡೆಸಿದ್ದಾರೆ.

ನಿನ್ನೆ ರಾತ್ರಿ 8:30ರಿಂದ ಇಂದು ನಸುಕಿನ 1:30ರವರೆಗೆ ಪಾಕ್ ಸೈನಿಕರು ನಮ್ಮ ನೆಲೆಗಳ ಮೇಲೆ ದಾಳಿ ನಡೆಸಿದ್ದು, ನಮ್ಮವರೂ ಪ್ರತಿದಾಳಿ ನಡೆಸಿದ್ದಾರೆ. ಯಾರಿಗೂ ಗಾಯಗಳಾಗಿಲ್ಲ ಎಂದು ರಕ್ಷಣಾ ವಕ್ತಾರರು ತಿಳಿಸಿದರು.

ಭಾರತವು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸರ್ಜಿಕಲ್ ದಾಳಿಗಳನ್ನು ನಡೆಸಿದ ಬಳಿಕ ಪಾಕಿಸ್ತಾನವು 29 ಬಾರಿ ಕದನ ವಿರಾಮವನ್ನು ಉಲ್ಲಂಘಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News