×
Ad

ಪತ್ರಕರ್ತರ ಮೇಲೆ ಹಲ್ಲೆ: ಕರವೇ ಪ್ರತಿಭಟನೆ

Update: 2016-10-18 23:04 IST

ಚಿಕ್ಕಮಗಳೂರು, ಅ.18: ರಾಜ್ಯದ ವಿವಿಧೆಡೆ ಪತ್ರಕರ್ತರ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ವೇದಿಕೆಯ ತಾಲೂಕು ಅಧ್ಯಕ್ಷ ಮನೋಜ್ ಶೆಟ್ಟಿ ಅವರ ನೇತೃತ್ವದಲ್ಲಿ ಆಝಾದ್ ಪಾರ್ಕ್ ವೃತ್ತದ ಬಳಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

 ಈ ಸಂದಭರ್ ಮಾತನಾಡಿದ ಮನೋಜ್ ಶೆಟ್ಟಿ, ರಾಜ್ಯದ ವಿವಿಧೆಡೆ ಪತ್ರಕರ್ತರ ಮೇಲೆ ಹಲ್ಲೆ ನಡೆಯುತ್ತಿದ್ದರೂ ಅದನ್ನು ತಡೆಗಟ್ಟುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದು ಆರೋಪಿಸಿದರು. ಬೆಂಗಳೂರಿನ ಹೊಸಕೋಟೆಯಲ್ಲಿ ಸುದ್ದಿಗೆ ತೆರಳಿದ್ದ ಸುದ್ದಿ ವಾಹಿನಿಯ ವರದಿಗಾರರ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿರುವುದು, ಇದರ ಜೊತೆಗೆ ಪೊಲೀಸರು ವರದಿಗಾರರನ್ನು ಅಕ್ರಮವಾಗಿ ಬಂಧನದಲ್ಲಿಟ್ಟು ಹಿಂಸೆ ನೀಡಿರುವುದು ಖಂಡನೀಯ ಎಂದ ಅವರು ಇಂತಹ ಪ್ರಕರಣಗಳು ನಡೆದರೆ ಪತ್ರಕರ್ತರು ಕಾರ್ಯ ನಿರ್ವಹಿಸುವುದು ಹೇಗೆ ಎಂದು ಪ್ರಶ್ನಿಸಿದರು. ನಂತರ ಮೆರವಣಿಗೆ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಸಮೀಪ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಎಂ.ಎಲ್ ವೈಶಾಲಿ ಅವರಿಗೆ ಮನವಿ ಸಲ್ಲಿಸಿದರು. ಕರವೇ ಜಿಲ್ಲಾ ವಕ್ತಾರ ಕೋಟೆ ಸೋಮಣ್ಣ, ಪ್ರಧಾನ ಕಾರ್ಯದರ್ಶಿ ಪಂಚಾಕ್ಷರಿ, ತಾಲೂಕು ಉಪಾಧ್ಯಕ್ಷ ಕುಮಾರ್ ಆರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅಜಯ್ ಕುಮಾರ್, ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ನಾಗಲತಾ, ನಗರಾಧ್ಯಕ್ಷ ವಿನೋದ್ ಕುಮಾರ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News