ಕೋಮುಭಾವನೆ ಕೆರಳಿಸುವಲ್ಲಿಕಾಂಗ್ರೆಸ್ಸಿಗರು ನಿಸ್ಸೀಮರು

Update: 2016-10-18 18:33 GMT

ಬೆಂಗಳೂರು, ಅ.18: ಸಮಾಜದಲ್ಲಿ ಕೋಮುಭಾವನೆಗಳನ್ನು ಕೆರಳಿಸಿ ಮತಗಳನ್ನು ಪಡೆಯುವಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಗೋವಿಂದ ಕಾರಜೋಳ ಆರೋಪಿಸಿದ್ದಾರೆ.
ಮಂಗಳವಾರ ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬೆಂಗಳೂರು ಎಸ್ಸಿ ಮೋರ್ಚಾದ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೋಮುಭಾವನೆ ಕೆರಳಿಸಿ ರಾಜಕೀಯ ಲಾಭ ಪಡೆದುಕೊಳ್ಳುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು ಎಂದರು ಆರೋಪಿಸಿದರು.
ದೇಶಕ್ಕೆ ಸ್ವಾತಂತ್ರ ಬಂದು 70 ವರ್ಷಗಳಾಗಿವೆ. ಈ ಅವಯಲ್ಲಿ ಸುಮಾರು 55 ವರ್ಷಗಳ ಕಾಲ ದೇಶದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರಗಳು ಆಡಳಿತ ನಡೆಸಿವೆ. ನೆಹರೂ-ಗಾಂಕುಟುಂಬವೇ 35 ವರ್ಷಗಳ ದೇಶದ ಆಡಳಿತ ಚುಕ್ಕಾಣಿಯನ್ನು ತನ್ನ ಕೈಯಲ್ಲಿಟ್ಟುಕೊಂಡಿತ್ತು ಎಂದು ಅವರು ತಿಳಿಸಿದರು.ಷ್ಟೊಂದು ಸುದೀರ್ಘ ಅವಗೆ ದೇಶದಲ್ಲಿ ಕಾಂಗ್ರೆಸ್ ಆಡಳಿತ ನಡೆಸಿದೆ. ಆದರೂ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರ ಉದ್ಧಾರ, ಅಭಿವೃದ್ಧಿ ಯಾಗಿಲ್ಲ. 21ನೆ ಶತಮಾನದಲ್ಲಿ ಎಲ್ಲವೂ ಬದಲಾಗುತ್ತಿದೆ. ವಿದ್ಯಾವಂತ ಯುವಕರು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸುತ್ತಿದ್ದಾರೆ ಎಂದು ಗೋವಿಂದ ಕಾರಜೋಳ ಹೇಳಿದರು.
ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾದ ಅಧ್ಯಕ್ಷ ಡಿ.ಎಸ್.ವೀರಯ್ಯ, ಬೆಂಗಳೂರು ನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್.ಮುನಿರಾಜು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News