ಪೊಲೀಸ್ ಇಲಾಖೆಯ 21 ಸಾವಿರ ಹುದ್ದೆಗಳನ್ನುಯಾವಾಗ ಭರ್ತಿ ಮಾಡುತ್ತೀರಿ: ಸರಕಾರಕ್ಕೆಹೈಕೋರ್ಟ್ ಪ್ರಶ್ನೆ

Update: 2016-10-18 18:36 GMT

ಬೆಂಗಳೂರು, ಅ.18: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ವಿವಿಧ ಶ್ರೇಣಿಯ ಹುದ್ದೆಗಳ ನೇಮಕಾತಿಗೆ ವಾರ್ಷಿಕ ರಚನಾತ್ಮಕ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳು ಸೇರಿದಂತೆ ಒಟ್ಟು 21 ಸಾವಿರ ಹುದ್ದೆಗಳು ಖಾಲಿ ಇವೆ ಎಂದು ಹೇಳುತ್ತಿದ್ದೀರಿ. ಇವುಗಳನ್ನು ಯಾವಾಗ ಭರ್ತಿ ಮಾಡುತ್ತೀರಿ ಎಂದು ನ್ಯಾ.ವೇಣುಗೋಪಾಲಗೌಡ ಅವರಿದ್ದ ನ್ಯಾಯಪೀಠವು ಸರಕಾರಿ ಪರ ವಕೀಲ ಪೊನ್ನಣ್ಣ ಅವರನ್ನು ಪ್ರಶ್ನಿಸಿತು.ಪ್ರಶ್ನೆಗೆ ಉತ್ತರಿಸಿದ ವಕೀಲರು, ಸದ್ಯ 6,800 ಪೊಲೀಸ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿತ್ತು. ಈ ಅರ್ಜಿಗಳಿಗೆ ಸಂಬಂಸಿದಂತೆ ಪೊಲೀಸ್ ಹುದ್ದೆಗಳಿಗೆ ದೈಹಿಕ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆ ನಡೆಯುತ್ತಿವೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಪ್ರತೀ ವರ್ಷ 2,207 ಜನರನ್ನು ಪೊಲೀಸ್ ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಈ ಕೆಲಸವು 2019ರವರೆಗೆ ನಡೆಯುತ್ತದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಾಗಲೇ ಎಸ್ಸೆ ಹಾಗೂ ಕಾನ್‌ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಅಭ್ಯರ್ಥಿಗಳು ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಲು ಇನ್ನು 9 ತಿಂಗಳಾದರೂ ಬೇಕಾುತ್ತದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ವಾದ ಆಲಿಸಿದ ನ್ಯಾಯಪೀಠವು ವಿಚಾರಣೆಯನ್ನು ಅ.28ಕ್ಕೆ ಮುಂದೂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News